Assam Ex CM Tarun Gogoi | ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಕೊರೊನಾ ಸೊಂಕಿಗೆ ಬಲಿ








ನವದೆಹಲಿ: ಗಂಭೀರ ಆರೋಗ್ಯ ಸ್ಥಿತಿಯನ್ನು ಎದುರಿಸುತ್ತಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಅಸ್ತಂಗತರಾಗಿದ್ದಾರೆ. 84 ವರ್ಷದ ಅವರಿಗೆ ಆಗಸ್ಟ್ 25ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. 


ಹೀಗಾಗಿ ಅವರು ಆಸ್ಪತ್ರೆ ಸೇರಿದ್ದರು. ವೈದ್ಯರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗೆ ಒಳಗಾಗಿದ್ರೂ ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಅವರನ್ನ ವೆಂಟಿಲೇಟರ್ ನಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ ಎಂದು ಅವರು ಕುಟುಂಬ ಮೂಲಗಳು ಸ್ಪಷ್ಟಪಡಿಸಿವೆ.



ಗುವಾಹಟಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರ ನಿಧನಕ್ಕೆ ಅನೇಕ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.




2001 -2016ರವರೆಗೂ ಮೂರು ಸತತ ಅವಧಿಗೆ ಅವರು ಅಸ್ಸಾಂ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ್ದಾರೆ. ಮೂರು ಬಾರಿಗೆ ಕಾಂಗ್ರೆಸ್ ನಿಂದ ಗೆದ್ದು ಸಿಎಂ ಆಗಿದ್ದವರು ಗೊಗೊಯ್, ರಾಜ್ಯದ ಅಭಿವೃದ್ಧಿಗೆ ವಿಶೇಷ ಕೊಡುಗೆ ನೀಡಿದ್ದರು.

BREAKING NEWS
Loading latest news...
Join our WhatsApp Channel Powered By : Online Pudu