SCDCC Bank Award | ದ.ಕ. ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಪ್ರಶಸ್ತಿಯ ಗರಿ









ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ ಸತತ ಮೂರನೇ ಬಾರಿ ಪ್ರತಿಷ್ಠಿತ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.



ಇತ್ತೀಚೆಗೆ ಮಂಗಳೂರಿನ ಎಸ್ ಸಿಡಿಸಿಸಿ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಈ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.



ಸತತ ಮೂರನೇ ಬಾರಿಯ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ಬ್ಯಾಂಕ್ ಅಧ್ಯಕ್ಷರಾದ ಜಗದೀಶ್ಚಂದ್ರ ಸೂಟರ್ ಪೇಟೆ ಅವರು ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ' ಸಹಕಾರ ರತ್ನ ' ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಂದ ಸ್ವೀಕರಿಸಿದರು.