ಮಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿಕಟವರ್ತಿಗಳೂ ಆಗಿರುವ ಬಿಜೆಪಿ ನಾಯಕ ಹಾಗೂ ಸಾಮಾಜಿಕ ಮುಂದಾಳು ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಅವರನ್ನು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸರ್ಕಾರದ ನೇಮಕದಿಂದ ಜಿಲ್ಲಾ ಬಿಜೆಪಿಯಲ್ಲಿ ಅತೀವ ಸಂತಸ ಸೃಷ್ಟಿಯಾಗಿದೆ. ರವೀಂದ್ರ ಶೆಟ್ಟಿ ಅವರ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸಿದ್ದಾರೆ.
