Moodabidri Alvas News | ಮೂಡಬಿದಿರೆ: ಆಳ್ವಾಸ್ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ವೆಬಿನಾರ್





ಮೂಡಬಿದಿರೆ: ಭಾರತ ಪ್ರಾಚೀನ ಕಾಲದಿಂದಲೂ ಶಿಕ್ಷಣ ಕ್ಷೇತ್ರದಲ್ಲಿ ಸಾರ್ವಭೌಮತ್ವ ಹೊಂದಿದ್ದು, ಈಗಿನ ಆಧುನಿಕ ಕಾಲಘಟಕ್ಕೆ ಸಂಬಂಧಿಸಿದಂತೆ ಶಿಕ್ಷಣದ ವ್ಯವಸ್ಥೆಯನ್ನು ಮರುವಿನ್ಯಾಸಗೊಳಿಸುವ ಅಗತ್ಯವಿದೆ ಎಂದು ಸುರತ್ಕಲ್ ಎನ್‌ಐಟಿಕೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ. ಬಲವೀರ ರೆಡ್ಡಿ ಅಭಿಪ್ರಾಯಪಟ್ಟರು.



ಅವರು ಮೂಡಬಿದಿರೆ ಆಳ್ವಾಸ್ ಇನ್ಸ್‌ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಶಿಕ್ಷಕರ ಪಾತ್ರ ಎಂಬ ವಿಷಯದ ಬಗ್ಗೆ ನಡೆದ ವೆಬಿನಾರ್‌ ಉದ್ದೇಶಿಸಿ ಮಾತನಾಡಿದರು.



ಈ ವೆಬಿನಾರ್‌ ನಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅವರು, ಕೇಂದ್ರ ಸರ್ಕಾರವು ಸಮಗ್ರ ಮತ್ತು ಬಹುಶಿಸ್ತೀಯ ರೀತಿಯ ವಿಧಾನವನ್ನು ಶಿಕ್ಷಣ ಕ್ಷೇತ್ರಕ್ಕೆ ಪರಿಚಯ ಮಾಡುವ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿದೆ. ನಾಲ್ಕನೇ ಕೈಗಾರಿಕಾ ಕ್ರಾಂತಿಯ ಸುಸಮಯದಲ್ಲಿ ನಾವಿದ್ದೇವೆ ಎಂದು ಹೇಳಿದರು.



ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಸಮೂಹ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು, ಬೋಧಕ-ಬೋಧಕೇತರ ಸಿಬ್ಬಂದಿ ಈ ವೆಬಿನಾರ್‌ನಲ್ಲಿ ಪಾಲ್ಗೊಂಡಿದ್ದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಮೇಘಾ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. 



ಸಂಸ್ಥೆಯ ಮ್ಯಾನೇಜ್‌ಮೆಂಟ್ ಟ್ರಸ್ಟಿ ಎಂ. ವಿವೇಕ್ ಆಳ್ವ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪ್ಲೇಸ್‌ಮೆಂಟ್ ಅಧಿಕಾರಿ ಸುಶಾಂತ್ ಅನಿಲ್ ಲೋಬೋ ವೆಬಿನಾರ್‌ನಲ್ಲಿ ಪಾಲ್ಗೊಂಡರು.