-->
Ravindra Shetty taken charge | ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಉಳಿದೊಟ್ಟು ಅಧಿಕಾರ ಸ್ವೀಕಾರ

Ravindra Shetty taken charge | ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಉಳಿದೊಟ್ಟು ಅಧಿಕಾರ ಸ್ವೀಕಾರ

ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಉಳಿದೊಟ್ಟು ಅಧಿಕಾರ ಸ್ವೀಕಾರ


ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ದೇಶನದ ಮೇರೆಗೆ ಕರಾವಳಿಯ ಪ್ರಭಾವಿ ನಾಯಕ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು.ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿಜಯ ಪ್ರಕಾಶ್ ಅವರಿಂದ ರವೀಂದ್ರ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ವಸಂತ ನಗರದ ನಿಗಮದ ಕಚೇರಿಯಲ್ಲಿ ಸರಳ ಸಮಾರಂಭದಲ್ಲಿ ಅವರು ನಿಗಮ ಅಧ್ಯಕ್ಷರಾಗಿ ಜವಾಬ್ದಾರಿಯನ್ನು ವಹಿಸಿಕೊಂಡರು.

ಈ ಸಂದರ್ಭದಲ್ಲಿ ಪತ್ನಿ ಸೌಮ್ಯ ಶೆಟ್ಟಿ ಹಾಗೂ ಪುತ್ರರು ಉಪಸ್ಥಿತರಿದ್ದರು. ಅಧಿಕಾರ ಸ್ವೀಕಾರ ಬಳಿಕ, ಸೂಡಿ ಸುರೇಶ್, ನರಸೇಗೌಡ ಟಿ.ಕೆ., ಬಾಲಕೃಷ್ಣ ಶೆಟ್ಟಿ, ಸದಾನಂದ ಶೆಟ್ಟಿ, ಪ್ರಕಾಶ್ ಬೆಂಗಳೂರು ಮತ್ತಿತರರು ರವೀಂದ್ರ ಶೆಟ್ಟಿ ಅವರನ್ನು ಅಭಿನಂದಿಸಿದರು. 


ಇದಕ್ಕೂ ಮುನ್ನ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸಿಎಂ ನಿವಾಸದಲ್ಲಿ ಭೇಟಿಯಾಗಿದ್ದ ರವೀಂದ್ರ ಶೆಟ್ಟಿ ಮತ್ತವರ ಕುಟುಂಬ ಆಶೀರ್ವಾದ ಪಡೆದುಕೊಂಡಿದ್ದರು.


Ads on article

Advertise in articles 1

advertising articles 2

Advertise under the article

WhatsApp Image 2021-10-17 at 10.29.15 PM (1).jpeg