ಬೆಂಗಳೂರು: ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಪ್ರತಿಷ್ಠಿತ ಕರ್ನಾಟಕ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರಾಗಿ ನೇಮಕಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
ಕಳೆದ 25 ವರ್ಷಗಳಿಂದ ಅವರು ಬ್ಯಾಂಕ್‌ನ ಅಧ್ಯಕ್ಷರಾಗಿ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ಧಾರೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕರಾವಳಿಯ ಸಹಕಾರಿ ರಂಗದಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ರಾಜೇಂದ್ರ ಕುಮಾರ್ ಅವರ ಹೆಸರು ಪ್ರತಿಷ್ಠಿತ ಇಫ್ಕೋ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೂ ಕೇಳಿಬರುತ್ತಿದೆ.
