sexual harassment by mescom employee | ಪುತ್ತೂರು: ಪ್ರೀತಿಸುವಂತೆ ಬಾಲಕಿಯನ್ನು ಪೀಡಿಸುತ್ತಿದ್ದ ಮೆಸ್ಕಾಂ ಸಿಬ್ಬಂದಿ ಅರೆಸ್ಟ್





ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ತನ್ನನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಮೆಸ್ಕಾಂ ಉದ್ಯೋಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸೊಯಬ್ ಕೊತ್ವಾಲ್ ಎಂದು ಗುರುತಿಸಲಾಗಿದೆ.



ಸವಣೂರಿನ ಪೆರಿಯಡ್ಕ ಎಂಬಲ್ಲಿನ ನಿವಾಸಿಯಾಗಿರುವ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಯನ್ನು ಈತ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಮೆಸ್ಕಾಂ ಸಿಬ್ಬಂದಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.



ಸಾಮಾಜಿಕ ಜಾಲತಾಣವಾದ Instagram ಮೂಲಕ ಸಂಪರ್ಕ ಬೆಳೆಸಿಕೊಂಡಿದ್ದ. ಫ್ರೆಂಡ್ ರಿಕ್ವೆಸ್ಟ್ ಕಳಿಸಿ ತನ್ನನ್ನು ಪ್ರೀತಿಸುವಂತೆ ಬಲವಂತ ಪಡಿಸುತ್ತಿದ್ದ.



ಈ ವಿಚಾರ ಸವಣೂರಿನ ಹಿಂದೂ ಜಾಗರಣ ವೇದಿಕೆಯ ಗಮನಕ್ಕೆ ಬಂದ ಕೂಡಲೇ ಅದರ ಕಾರ್ಯಕರ್ತರು ಕಾರ್ಯಪ್ರವೃತ್ತರಾದರು. ಸಂತ್ರಸ್ತ ಯುವತಿಯ ಮನೆಗೆ ಭೇಟಿ ನೀಡಿ ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಸತ್ಯಾಸತ್ಯತೆಯನ್ನು ತಿಳಿದುಕೊಂಡರು. 



ದೂರದ ಜಿಲ್ಲೆಯಿಂದ ಉದ್ಯೋಗ ನಿಮಿತ್ತ ಬಂದಿರುವ ಸೊಯಬ್, ಹಿಂದೂ ಯುವತಿಯನ್ನು ಯಾಮಾರಿಸಿ ತನ್ನ ಪ್ರೀತಿಯ ಬಲೆಗೆ ಬೀಳಿಸಲು ನಡೆಸುತ್ತಿದ್ದ ಯತ್ನವಾಗಿದ್ದು, ಇದೊಂದು ಲವ್ ಜೆಹಾದ್ ಆಗಿರಬಹುದು ಎಂದು ಬಲವಾದ ಶಂಕೆ ವ್ಯಕ್ತಪಡಿಸಿದ್ದಾರೆ.



ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಾರೆ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu