ಮಂಗಳೂರು: ಉಗ್ರ ಸಂಘಟನೆ ಬೆಂಬಲಿಸಿ ನಗರದ ವಿವಿಧೆಡೆ ಗೋಡೆ ಬರಹ ಬರೆದ ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ಕನೇ ಆರೋಪಿಗೂ ಶೀಘ್ರದಲ್ಲೇ ಕೋಳ ತೊಡಿಸಿದ್ದಾರೆ. ಆರೋಪಿಯನ್ನು ಈಗಾಗಲೇ ಗುರುತಿಸಲಾಗಿದ್ದು, ಆರೋಪಿಯ ಪತ್ತೆಗಾಗಿ ವಿಶೇಷ ತಂಡದಿಂದ ಶೋಧ ಕಾರ್ಯ ನಡೆಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿ ಇದ್ದು, ಈ ಕಾರಣದಿಂದ ಹೆಚ್ಚಿನ ಮಾಹಿತಿ ನೀಡುವಂತಿಲ್ಲ ಎಂದು ಹೇಳಿದ್ದಾರೆ.
ಉಗ್ರರ ಪರ ಗೋಡೆಬರಹ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಮೂವರಿಗೆ ಕೋಳ ತೊಡಿಸಿದ್ದು, ಇನ್ನೊಬ್ಬ ವ್ಯಕ್ತಿ ಶಾಮೀಲಾಗಿರುವ ಬಲವಾದ ಸಾಕ್ಷ್ಯಗಳು ದೊರೆತಿವೆ.
ಇತ್ತೀಚೆಗೆ ಬಂಧಿತನಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಸಾದತ್(೫೦)ನನ್ನು ತನಿಖೆಗೊಳಪಡಿಸಲಾಗಿದ್ದು, ಆತನಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಚಾರಗಳು ಗೊತ್ತಾಗಿದೆ. ಈ ಆಧಾರದಲ್ಲಿ ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.