ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಿಥುನ್ ರೈ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
ಕರಾವಳಿ ಪ್ರದೇಶದಲ್ಲಿ ಮಿಥುನ್ ಪ್ರಭಾವಿ ನಾಯಕ. ಅವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ಇದೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಅವರು ಹೇಳಿದರು.
ಅಲ್ಲದೆ, ಮಿಥುನ್ ನನ್ನ ಸಹವರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ನಾನು ಅಧ್ಯಕ್ಷರಾಗಿರುವಾಗ ಅವರ ಸ್ಪರ್ಧೆ ಬೇರೆಯೇ ಆದ ಸಂದೇಶ ನೀಡುತ್ತದೆ ಎಂದು ಶಿವಕುಮಾರ್ ಹೇಳಿದ್ದಾರೆ.