
KPCC media panelist appointed | ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಫಝಲ್ ಕೋಡಿಂಬಾಳ ನೇಮಕ: ಡಿಕೆಶಿ ಆದೇಶ
1/17/2021 10:33:00 AM
ಕಡಬ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಮಾಜಿ ಕಡಬ ತಾ.ಪಂ. ಸದಸ್ಯ ಫಝಲ್ ಕೋಡಿಂಬಾಳ ಅವರನ್ನು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನೇಮಕಗೊಳಿಸಿ ಅದೇಶ ಹೊರಡಿಸಿದ್ದಾರೆ.
ಎನ್. ಎಸ್.ಯು.ಐ ಮೂಲಕ ರಾಜಕೀಯ ಪ್ರವೇಶಿಸಿ ಸತತ ಮೂರು ಬಾರಿ ಕಡಬ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿರುವ ಇವರು ಕಡಬ ಗ್ರಾ.ಪಂ. ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಕಳೆದ ಬಾರಿ ಕಡಬ ತಾ.ಪಂ. ಸದಸ್ಯರಾಗಿದ್ದರು ಬಳಿಕ ಕಡಬ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿದಾಗ ತಾಲೂಕು ಪಂಚಾಯತ್ ಸದಸ್ಯ ಸ್ಥಾನ ಕಳೆದುಕೊಂಡಿದ್ದರು.
ಮಂಗಳೂರು ಲೋಕಸಭಾ ಕ್ಷೇತ್ರದ ರಾಷ್ಟ್ರೀಯ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ತೊಡಗಿಸಿಕೊಂಡಿದ್ದರು.