-->

KPSC Question paper leak-FDA exam postponed | ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಎಫ್‌ಡಿಎ ಪರೀಕ್ಷೆ ಮುಂದೂಡಿಕೆ

KPSC Question paper leak-FDA exam postponed | ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಎಫ್‌ಡಿಎ ಪರೀಕ್ಷೆ ಮುಂದೂಡಿಕೆ




ಕರ್ನಾಟಕ ಲೋಕಸೇವಾ ಆಯೋಗ ಮತ್ತೊಮ್ಮೆ ಮುಖಭಂಗಕ್ಕೆ ಒಳಗಾಗಿದೆ. ಭಾನುವಾರ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದೆ.


ಇದರಿಂದ ಭಾನುವಾರ ನಡೆಯಬೇಕಿದ್ದ ಎಫ್‌ಡಿಎ ಪರೀಕ್ಷೆಯನ್ನು ಮುಂದೂಡುವ ಮೂಲಕ ಅಭ್ಯರ್ಥಿಗಳಿಗೆ ಬಿಗ್ ಶಾಕ್ ನೀಡಿದಂತಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಈ ಕ್ರಮ ಕೈಗೊಳ್ಳಲಾಗಿದೆ.


ತುಮಕೂರಿನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಮುಂದಿನ ದಿನಾಂಕ ನಿಗದಿಗೊಳಿಸಿ ಈ ಬಗ್ಗೆ ಪ್ರಕಟಣೆ ಮಾಡಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಸತ್ಯವತಿ ಹೇಳಿದ್ದಾರೆ.




ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಆರೋಪಿಗಳಿಂದ 24 ಲಕ್ಷ ರೂ. ನಗದು ಮತ್ತು ಮೂರು ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.


ಭಾನುವಾರ ನಡೆಯಬೇಕಿದ್ದ ಪರೀಕ್ಷೆಯಲ್ಲಿ ನಾಲ್ಕು ಲಕ್ಷ ಅಭ್ಯರ್ಥಿಗಳು ಭಾಗಿಯಾಗಲಿದ್ದರು. 


Karnataka Public Service Commission KPSC has postponed its FDA exam which is going to be conducted tomorrow all over the state. The reason behind this decision is leak of question paper. three accused are nabbed by the Tumkur Police. 24 lakh cash and 3 car seized from the accused.

Ads on article

Advertise in articles 1

advertising articles 2

Advertise under the article