ಅಚ್ಚರಿಯ ಬೆಳವಣಿಗೆಯೊಂದರಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪೈಕಿ ಪ್ರಭಾವಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅದಕ್ಕೆ ಅವರು ಕೊಟ್ಟ ಕಾರಣ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೀಡು ಮಾಡಿದೆ.
ತಾನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ನಾಗಿದ್ದೇನೆ ಮತ್ತು ಅವರ ಸೂಚನೆಯಂತೆ ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದು ಅವರು ತಮ್ಮ ನಿವೃತ್ತಿಯ ಕಾರಣವನ್ನು ಬಿಚ್ಚಿಟ್ಟಿದ್ದಾರೆ.
ಜನವರಿ 10, 11 ಹಾಗೂ 13ರಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ನಡೆಯುತ್ತಿದೆ. ಈ ಪ್ರಭಾವಿ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕೂಡ ಸ್ಪರ್ಧೆ ನಡೆಸಿದ್ದರು.
Also watch this vedio:
ಇದೀಗ ತಾವು ಕೆಪಿಸಿಸಿ ಅಧ್ಯಕ್ಷರ ಸೂಚನೆಯಂತೆ ನಿವೃತ್ತಿಯಾಗಿದ್ದು, ಎಲ್ಲರೂ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ಧಾರೆ.