ದಕ್ಷಿಣ ಕನ್ನಡ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದವರಿಗೆ ಮಾಹಿತಿ ಶಿಬಿರ ಮತ್ತು ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಪಡುಪೆರಾರು ಪಂಚಾಯತ್ ಸಂಕೀರ್ಣದಲ್ಲಿ ನಡೆದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿಯವರು ವಹಿಸಿದ್ದರು.
ಈ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ಹಕ್ಕು ಪತ್ರ ವಿತರಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ಧನ ಗೌಡ , ದ. ಕ ಜಿಲ್ಲಾ ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಸಚಿನ್, ಮಂಗಳೂರು ತಾಲ್ಲೂಕು ಅಧಿಕಾರಿ ಮಹಾಲಕ್ಷ್ಮಿ , ಸಂಪನ್ಮೂಲ ವ್ಯಕ್ತಿಯಾಗಿ ವಿಜಯಲಕ್ಷ್ಮಿ ಕಟೀಲು ಭಾಗವಹಿಸಿದ್ದರು.
ಸ್ಥಳೀಯ ಪಂಚಾಯತ್ ಸದಸ್ಯೆ ವಿದ್ಯಾ ಜೋಗಿ ಧನ್ಯವಾದ ನೀಡಿದರು, ಕೆ.ರಾಧೇಶ್ ಕಾರ್ಯಕ್ರಮ ನಿರೂಪಿಸಿದರು.




