ಮಂಗಳೂರು: ತುಳು ಚಿತ್ರರಂಗದ ಪ್ರತಿಭಾವಂತ ನಟ ರೂಪೇಶ್ ಶೆಟ್ಟಿ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್. ರೂಪೇಶ್ ಶೆಟ್ಟಿ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಶಿರಾಡಿ ಘಾಟ್‌ನಲ್ಲಿ ಈ ಘಟನೆ ನಡೆದಿದ್ದು, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ರೂಪೇಶ್ ಶೆಟ್ಟಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಅವರು ಗೆಳೆಯರ ಜೊತೆಗೂಡಿ ಪ್ರಯಾಣಿಸುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಕಳೆದ ವರ್ಷವಷ್ಟೇ ಗಿರಿಗಿಟ್ ಎಂಬ ಸಿನಿಮಾದ ನಾಯಕ ನಟನಾಗಿದ್ದ ರೂಪೇಶ್ ಶೆಟ್ಟಿ ತುಳು ಚಿತ್ರರಂಗದ ಬಹುಬೇಡಿಕೆಯ ಸ್ಟಾರ್ ನಟನಾಗಿ ಗುರುತಿಸಿಕೊಂಡಿದ್ದರು. ವಿವಾದ ಮಧ್ಯೆಯೂ ಚಿತ್ರರಂಗ ಸೂಪರ್ ಡ್ಯೂಪರ್ ಹಿಟ್ ಆಗಿತ್ತು.
ರೂಪೇಶ್ ಶೆಟ್ಟಿ ಈಗ ಕನ್ನಡ ಸಹಿತ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

