ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಸ್‌ಡಿಪಿಐ ಸದಸ್ಯ ಸಿದ್ದಿಕ್ ಉಳ್ಳಾಲ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಿಕ್ ಮೇಲೆ ಉಳ್ಳಾಲ ಪೊಲೀಸರು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ.
15 ವರ್ಷಗಳ ಹಿಂದೆ ಇಸ್ಲಾಂಗೆ ಮತಾಂತರಗೊಂಡು ಉಳ್ಳಾಲ ನಿವಾಸಿಯೊಬ್ಬರನ್ನು ಮದುವೆಯಾಗಿದ್ದ ಮಹಿಳೆಯ ಪತಿ ಇಬ್ಬರು ಹೆಣ್ಣು ಮಕ್ಕಳನ್ನು ನೀಡಿ ಪರಾರಿಯಾಗಿದ್ದ.
ಈ ಕುಟುಂಬಕ್ಕೆ ಸಹಾಯ ಹಸ್ತ ಚಾಚುವ ನೆಪದಲ್ಲಿ ಸಿದ್ದಿಕ್ ಆಗಾಗ ಮಹಿಳೆಯ ಮನೆಗೆ ಭೇಟಿ ನೀಡುತ್ತಿದ್ದರು. ಈ ಭೇಟಿ ವೇಳೆ, ಮಹಿಳೆಯನ್ನು ಬಳಸಿಕೊಳ್ಳಲು ಸಿದ್ದಿಕ್ ಹಲವು ಬಾರಿ ಪ್ರಯತ್ನ ನಡೆಸಿದ್ದರೂ ಯಶಸ್ವಿಯಾಗಿರಲಿಲ್ಲ.
ನಂತರ ಇವರ ಇಬ್ಬರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇಬ್ಬರು ಬಾಲಕಿಯ ತಾಯಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


