-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
SDPI on Baba budangiri masjid mike issue | ಚಿಕ್ಕಮಗಳೂರು: ಬಾಬಾಬುಡನ್ ಗಿರಿ ಮಸೀದಿಯ ಬಾಂಗ್ ಮೈಕ್ ತೆರವು: ಎಸ್ಡಿಪಿಐ ಖಂಡನೆ

SDPI on Baba budangiri masjid mike issue | ಚಿಕ್ಕಮಗಳೂರು: ಬಾಬಾಬುಡನ್ ಗಿರಿ ಮಸೀದಿಯ ಬಾಂಗ್ ಮೈಕ್ ತೆರವು: ಎಸ್ಡಿಪಿಐ ಖಂಡನೆ




ಬೆಂಗಳೂರು : ನವೆಂಬರ್ ತಿಂಗಳ25ರಿಂದು ದತ್ತ ಪಾದುಕೆಗಳ ದರ್ಶನಕ್ಕೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಸಂಘಪರಿವಾರದ ಒತ್ತಡಕ್ಕೆ ಮಣಿದು 900 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಬಾಬಾಬುಡನ್ ಗಿರಿ ಮಸೀದಿಯ ಮೈಕ್ ಅನ್ನು ತೆರವುಗೊಳಿಸಿರುವುದು ಖಂಡನೀಯ ಜಿಲ್ಲಾಡಳಿತ ತಕ್ಷಣ ತಾತ್ಕಾಲಿಕವಾಗಿ ತೆರವು ಗೊಳಿಸಿರುವ ಮೈಕ್ ಅನ್ನು ಪುನಃ ಅಳವಡಿಸಬೇಕೆಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ ಯವರು ಆಗ್ರಹಿಸಿದ್ದಾರೆ.


ನ.25ರಂದು ಸಂಘಪರಿವಾರ ಪ್ರಾಯೋಜಿತ ದತ್ತಮಾಲೆ ಅಭಿಯಾನ ಆಚರಿಸಲು ಅವಕಾಶ ಮಾಡಿಕೊಡುವ ಮೂಲಕ ಜಿಲ್ಲಾಡಳಿತ ಬಾಬಾಬುಡನ್ ಗಿರಿ ಯಲ್ಲಿ 1975 ರ ಹಿಂದೆ ಇದ್ದಂತಹ ಧಾರ್ಮಿಕ ವಿಧಿ ವಿಧಾನಗಳನ್ನು ಹೊರತುಪಡಿಸಿ ಯಾವುದೇ ಹೊಸ ಆಚರಣೆಗಳಿಗೆ ಅವಕಾಶ ನೀಡಬಾರದು ಎಂಬ ಸುಪ್ರೀಂಕೋರ್ಟ್ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ .


ಎಸ್ಡಿಪಿಐ ರಾಜ್ಯ ಉಪಾಧ್ಯಕ್ಷರಾದ ಅಡ್ವೊಕೇಟ್ ಅಬ್ದುಲ್ ಮಜೀದ್ ಖಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ ರವರ ನೇತೃತ್ವದಲ್ಲಿ ಬಾಬಾಬುಡನ್ ಗಿರಿ ದರ್ಗಾದ ಮಸೀದಿಗೆ ಭೇಟಿ ನೀಡಿ ಅಲ್ಲಿನ ಸಜ್ಜಾದ್ ನಶೀನ್ ರವರೊಂದಿಗೆ ಮಾಹಿತಿ ಪಡೆದ ಎಸ್ಡಿಪಿಐ ನಿಯೋಗ ರಾಜ್ಯ ಮತ್ತು ನೆರೆ ರಾಜ್ಯಗಳ ಹಿಂದೂ ಮತ್ತು ಮುಸ್ಲಿಂ ಧರ್ಮದ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ದಿನಂಪ್ರತಿ ಆಗಮಿಸಿ ಸೂಫಿ ಸಂತರ ಆಶೀರ್ವಾದ ಪಡೆಯುವ ಪ್ರತೀತಿ ಕಳೆದ 900 ವರ್ಷಗಳಿಂದ ನಡೆದುಕೊಂಡು ಬಂದಿದೆ.


ಆದರೆ ಸಂಘಪರಿವಾರ ಪ್ರಾಯೋಜಿತ ದತ್ತಮಾಲೆ ಎಂಬ ನೂತನ ಆಚರಣೆ ದಿನದಂದು ಗಿರಿಯಲ್ಲಿ ಭಯದ ವಾತಾವರಣ ಸೃಷ್ಟಿಸಿ ಬೇರೆ ಧರ್ಮದ ಭಕ್ತಾದಿಗಳಿಗೆ ಬಾಬಾಬುಡನ್ ಗಿರಿಗೆ ಪ್ರವೇಶ ನಿರಾಕರಣೆ ಮಾಡುವುದನ್ನು ಎಸ್ಡಿಪಿಐ ಖಂಡಿಸುತ್ತದೆ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ads on article

Advertise in articles 1

advertising articles 2

Advertise under the article

ಸುರ