ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರದಲ್ಲಿ ಮಹತ್ವದ ಬದಲಾವಣೆಯಾಗಲಿದೆ, ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಸ್ಥಾನವನ್ನು ಶೀಘ್ರದಲ್ಲೇ ಕಳೆದುಕೊಳ್ಳಲಿದ್ಧಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಅವರನ್ನು ಶೀಘ್ರದಲ್ಲೇ ಸಿಎಂ ಸ್ಥಾನದಿಂದ ಕೆಳಗಿಳಿಸುತ್ತದೆ. ಅದು ಯಾವಾಗ, ಏಕೆ ಎಂಬುದು ಗೊತ್ತಿಲ್ಲ. ಆದರೆ, ಈ ಘಟನೆ ನಡೆಯುವುದಂತೂ ಖಚಿತ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಮೊದಲಿನಿಂದ ಹೋರಾಟ ಮತ್ತು ಸಂಘರ್ಷದಿಂದಲೇ ಬೆಳೆದುಬಂದಿದೆ. ಆದರೆ, ಬಿಜೆಪಿಗೆ ಇಂತಹ ಹಿನ್ನೆಲೆ ಇಲ್ಲ. ಕಾಂಗ್ರೆಸ್ ಜನಸಮುದಾಯದ ಪಕ್ಷ. ಮಾಸ್ ಪಕ್ಷವಾಗಿರುವ ಕಾಂಗ್ರೆಸ್ ಈಗ ಕಾರ್ಯಕರ್ತರ ಆಧಾರಿತ ಪಕ್ಷವಾಗಿ ಬದಲಾಗುತ್ತಿದೆ ಎಂದು ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿದರು.
