ಮಂಗಳೂರು ಮಹಾನಗರ ಪಾಲಿಕೆಯ ಶಿವಭಾಗ್ ವಾರ್ಡಿನಲ್ಲಿ 18 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ಕುರಿತು ಮಾತನಾಡಿದ ಶಾಸಕ ಕಾಮತ್, ಕುದ್ಕೋರಿಗುಡ್ಡೆ ಬಳಿ ಅಭಿವೃದ್ಧಿ ಕಾಮಗಾರಿಗೆ 15 ಲಕ್ಷ ಹಾಗೂ ಪದವು ಮೇಗಿನ ಮನೆ ದೇವಸ್ಥಾನದ ಸಮೀಪ ಅಭಿವೃದ್ಧಿ ಕಾಮಗಾರಿಗೆ 3 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದ್ದು ಸ್ಥಳೀಯರ ಸಮ್ಮುಖದಲ್ಲಿ ಗುದ್ದಲಿಪೂಜೆ ನೆರವೇರಿಸಿದ್ದೇವೆ. ಈಗಾಗಲೇ ಶಿವಭಾಗ್ ವಾರ್ಡಿನ ಪರಿಶಿಷ್ಟ ಜಾತಿ - ಪಂಗಡದ ಕಾಲೋನಿಗಳ ಅಭಿವೃದ್ಧಿಗೆ ವಿಶೇಷ ಅನುದಾನದ ಕುರಿತು ಚಿಂತನೆ ನಡೆಯುತ್ತಿದೆ. ಈ ಭಾಗದ ಸಾರ್ವಜನಿಕರ ಬೇಡಿಕೆಯ ಅನುಸಾರ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸ್ಥಳೀಯ ಮನಪಾ ಸದಸ್ಯೆ ಕಾವ್ಯಾ ನಟರಾಜ್, ಮಂಗಳೂರು ಮಹಾನಗರ ಪಾಲಿಕೆ ಲೆಕ್ಕಪತ್ರ ಸ್ಥಾಯಿ ಸಮಿತಿ ಅದ್ಯಕ್ಷರಾದ ಜಗದೀಶ್ ಶೆಟ್ಟಿ ಬೋಳೂರು, ಮನಪಾ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಅಜಯ್, ನವೀನ್ ಶೆಣೈ, ನಾಗೇಶ್ ಕುದ್ಕೋರಿಗುಡ್ಡೆ, ಚೇತನ್, ಜಗದೀಶ್ ಬೋಳಾರ, ವಸಂತ್ ಜೆ ಪೂಜಾರಿ, ಬಿಜೆಪಿ ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
