ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಭ್ರಷ್ಟಾಚಾರಕ್ಕೆ ಮತ್ತೊಂದು ಬಹಿರಂಗ ನಿದರ್ಶನ ಇಲ್ಲಿದೆ.
ಪಾಲಿಕೆಯ ಜಂಟಿ ನಿರ್ದೇಶಕ ಕೆ.ವಿ. ಜಯರಾಜ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಆದಾಯಕ್ಕಿಂತ ಹೆಚ್ಚಿನ ಅಪಾರ ಆಸ್ತಿ ಪತ್ತೆಯಾಗಿದೆ ಎನ್ನಲಾಗಿದೆ.
ಜಯರಾಜ್ ಅವರಿಗೆ ಸೇರಿದ ಮಂಗಳೂರು ಮನೆ, ಪಡೀಲ್‌ನಲ್ಲಿ ಇರುವ ಜಯರಾಜ್ ಅವರ ತಂದೆಯ ಮನೆ, ಮತ್ತು ಅವರ ಕೇರಳದಲ್ಲಿರುವ ಜಯರಾಜ್ ಪತ್ನಿಯವರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
ಕಾರ್ಯಾಚರಣೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಎಸ್‌ಪಿ ಬೋಪಯ್ಯ, ಡಿವೈಎಸ್‌ಪಿ ಕೆ.ಸಿ. ಪ್ರಕಾಶ್, ಇನ್ಸ್‌ಪೆಕ್ಟರ್‌ಗಳಾದ ಶ್ಯಾಂಸುಂದರ್, ಗುರುರಾಜ್ ಮತ್ತು ಇತರ ಸಿಬ್ಬಂದಿ ಭಾಗಿಯಾಗಿದ್ದಾರೆ.