ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳನ್ನು ಗುರಿಯಾಗಿರಿಸಿ ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ನಗರದ ಕೆ.ಎಸ್.ಆರ್.ಟಿ.ಸಿ. ಬಿಜೈ ಬಳಿಯ ಕಸ್ತೂರ್ಬಾ ಮೆಡಿಕಲ್ ಕಾಲೇಜು-ಕೆಎಂಸಿ ಬಳಿ ಕೊಕೇನ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪಿ ಬೋಳಾರದ ಸುಪ್ರೀತ್(35)ನನ್ನು ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ ಎರಡು ಲಕ್ಷ ರೂ.ಗೂ ಅಧಿಕ ಮೊತ್ತದ ಮಾದಕ ದ್ರವ್ಯ ಹಾಗೂ ಕೃತ್ಯಕ್ಕೆ ಬಳಸಿರುವ ಸಾಮಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ರಾಮಕೃಷ್ಣ ಕೆ.ಕೆ. ಹಾಗೂ ಸಿಬ್ಬಂದಿ ಈ ಯಶಸ್ವೀ ದಾಳಿಯನ್ನು ಸಂಘಟಿಸಿತ್ತು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
