
Complaint against BJP leader | ಕೋಟಿ-ಚನ್ನಯ್ಯ, ಬಿಲ್ಲವ ಸಮಾಜ, ಜನಾರ್ದನ ಪೂಜಾರಿ ಬಗ್ಗೆ ಅವಹೇಳನ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು
2/05/2021 10:41:00 AM
ತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರು, ಜಿಲ್ಲೆಯ ಪ್ರಮುಖ ಜನಸಮುದಾಯವಾದ ಬಿಲ್ಲವ ಸಮಾಜ ಹಾಗೂ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಮೂಡಬಿದಿರೆಯ ಜಗದೀಶ ಅಧಿಕಾರಿ ಈ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅವರ ವಿರುದ್ಧ ಮೂಡಬಿದಿರೆ ಪೊಲೀಸ್ ಠಾಣಾಧಿಕಾರಿಯವರಿಗೆ ಬಿಲ್ಲವ ಸಮಾಜದ ಮುಖಂಡರು ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಲಾಗಿದೆ.