-->
ಬಿಲ್ಲವ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಬಿಜೆಪಿ ಮುಖಂಡ, ಜಿಲ್ಲಾ ಉಪಾಧ್ಯಕ್ಷ ಜಗದೀಶ ಅಧಿಕಾರಿ ವಿರುದ್ಧ ಮೂಡಬಿದಿರೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಮೂಡಬಿದಿರೆ ಇದರ ಅಧ್ಯಕ್ಷರು ನೀಡಿದ ದೂರಿನ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪಕ್ಕಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ 295(A), 505 ಹಾಗೂ ಇತರ ಕಲಂ ಅಡಿ ಪ್ರಕರಣ ದಾಖಲಿಸಲಾಗಿದೆ.ಆರೋಪಿ ಜಗದೀಶ್ ಅಧಿಕಾರಿ ಅವರು ಕೋಟಿ-ಚನ್ನಯ್ಯ, ಬಿಲ್ಲವ ಸಮಾಜ, ಜನಾರ್ದನ ಪೂಜಾರಿ ಬಗ್ಗೆ ಅವಹೇಳನ ಮಾಢಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ಘಟನೆಯ ವಿವರತುಳುನಾಡಿನ ವೀರ ಪುರುಷರಾದ ಕೋಟಿ-ಚೆನ್ನಯರು, ಜಿಲ್ಲೆಯ ಪ್ರಮುಖ ಜನಸಮುದಾಯವಾದ ಬಿಲ್ಲವ ಸಮಾಜ ಹಾಗೂ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲಾಗಿದೆ.ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷ ಮೂಡಬಿದಿರೆಯ ಜಗದೀಶ ಅಧಿಕಾರಿ ಈ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಮೂಡಬಿದಿರೆ ಪೊಲೀಸ್ ಠಾಣಾಧಿಕಾರಿಯವರಿಗೆ ಬಿಲ್ಲವ ಸಮಾಜದ ಮುಖಂಡರು ದೂರು ನೀಡಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಲಾಗಿದೆ.

Ads on article

Advertise in articles 1

advertising articles 2

Advertise under the article