Accident at Charmadi | ಶಿವರಾತ್ರಿ ಪಾದಯಾತ್ರೆ ನಡೆಸುತ್ತಿದ್ದವರಿಗೆ ವಾಹನ ಡಿಕ್ಕಿ: 12 ಮಂದಿ ಗಾಯ
3/08/2021 06:48:00 PM
ಶಿವರಾತ್ರಿ ಹಿನ್ನೆಲೆಯಲ್ಲಿ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಪಾದಚಾರಿಗಳಿಗೆ ಟೆಂಪೊ ಟ್ರಾವೆಲರ್ ವಾಹನ ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, 10ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಶಿವರಾತ್ರಿಯ ಮಹಾಪೂಜೆಯಲ್ಲಿ ಪಾಲ್ಗೊಳ್ಳಲು ಪ್ರತಿ ವರ್ಷದಂತೆ ಇವರು ಪಾದಯಾತ್ರೆ ನಡೆಸಿ ಶ್ರೀ ಕ್ಷೇತ್ರ ಧರ್ಮಸ್ಥಳದತ್ತ ತೆರಳುತ್ತಿದ್ದರು.
ಗಾಯಾಳುಗಳನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಬಳಿಕ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಉಜಿರೆಯ ಸಾಮಾಜಿಕ ಕಾರ್ಯಕರ್ತ ಹಸನಬ್ಬ ಮತ್ತು ಇತರರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾದರು. ಟಿಟಿ ವಾಹನ ಚಾಲನಕ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.