Mask compulsory in Karnataka | ಕೊರೋನಾ ಭೀತಿ: ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ, ಇಲ್ಲವೇ ದಂಡ ವಸೂಲಿ





ಸತತ ಎರಡನೇ ದಿನವೂ ರಾಜ್ಯದಲ್ಲಿ ಕೊರೋನಾ ಪ್ರಕರಣ ಎರಡು ಸಾವಿರದ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ರಾಜ್ಯದಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಪಾಲನೆಯನ್ನು ಕಡ್ಡಾಯಗೊಂಡಿಸಿದೆ. ಮಾಸ್ಕ್ ಇಲ್ಲದಿದ್ದಲ್ಲಿ ಭಾರೀ ದೊಡ್ಡದ ದಂಡನೆ ವಿಧಿಸಲಾಗುವುದು.


ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.


ಅಧಿಸೂಚನೆ ಪ್ರಕಾರ, ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ದಂಡ ವಿಧಿಸಲಾಗುತ್ತದೆ ಪಾಲಿಕೆ ಹೊರತುಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸುವಂತೆ ಸೂಚಿಸಲಾಗಿದೆ.


ಇದೇ ವೇಳೆ, ಮಾಸ್ಕ್ ಗೆ ದಂಡ ವಿಧಿಸುವ ಅಧಿಕಾರವನ್ನು ಮುಖ್ಯ ಕಾನ್ಸ್‌ಟೆಬಲ್ ಮಟ್ಟದ ಅಧಿಕಾರಿಗಳಿಗೆ ನೀಡಲಾಗಿದೆ. ಅಥವಾ ಮಹಾನಗರ ಪಾಲಿಕೆಯ ಆರೋಗ್ಯ ನಿರೀಕ್ಷಕರು, ಹಾಗೂ ಇತರ ಮಾರ್ಷೆಲ್‌ಗಳು ದಂಡ ವಿಧಿಸಬಹುದಾಗಿದೆ.