-->

Siddu Dinner Politics | ಹಿರಿಯ ನಾಯಕರಿಗೆ ಸಿದ್ದರಾಮಯ್ಯ ಭೋಜನಕೂಟ: ಬಿಜೆಪಿ ವಿರುದ್ಧ ರಣತಂತ್ರ?

Siddu Dinner Politics | ಹಿರಿಯ ನಾಯಕರಿಗೆ ಸಿದ್ದರಾಮಯ್ಯ ಭೋಜನಕೂಟ: ಬಿಜೆಪಿ ವಿರುದ್ಧ ರಣತಂತ್ರ?





ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಏಕಕಂಠದಿಂದ ಹೋರಾಟ ಮಾಡುವ ನಿಟ್ಟಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಹೆಜ್ಜೆಯನ್ನು ಇಟ್ಟಿದ್ದಾರೆ. ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಅವರು ತಮ್ಮ ನಿವಾಸದಲ್ಲಿ ಹಿರಿಯ ನಾಯಕರಿಗೆ ಭೋಜನ ಕೂಟವನ್ನು ಆಯೋಜಿಸಿದ್ದಾರೆ.


ಮುಂದಿನ ದಿನಗಳಲ್ಲಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸುವುದು ಮತ್ತು ಬಿಜೆಪಿ ವಿರುದ್ಧ ರಣತಂತ್ರವನ್ನು ಹೆಣೆಯುವುದು ಮತ್ತು ಇತರ ವಿಚಾರಗಳ ಬಗ್ಗೆ ಇಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಮತ್ತು ರಾಜ್ಯಸಭಾ ಸದಸ್ಯರು ಸೇರಿದಂತೆ ಹಿರಿಯ ಮುಖಂಡರು ಈ ಭೋಜನ ಕೂಟದಲ್ಲಿ ಪಾಲ್ಗೊಳ್ಳಿದ್ದಾರೆ.


ಉಪ ಚುನಾವಣೆ, ಸಿಡಿ ರಾಜಕೀಯ, ಮೀಸಲಾತಿ ಹಾಗೂ ಇತರ ವಿಚಾರಗಳ ಬಗ್ಗೆ ಹಿರಿಯ ನಾಯಕರ ಜೊತೆ ಒಮ್ಮತಾಭಿಪ್ರಾಯವನ್ನು ಮೂಡಿಸಲು ಸಿದ್ದರಾಮಯ್ಯ ಬಯಸಿದ್ದಾರೆ ಎನ್ನಲಾಗಿದೆ.


ಕಳೆದ ಎರಡು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದ್ದು, ಈ ಬಾರಿ ಗೆಲ್ಲಲೇಬೇಕಾದ ಅನಿವಾರ್ಯತೆ ಪಕ್ಷಕ್ಕಿದೆ. ಜೊತೆಗೆ ಸಂಭಾವ್ಯ ಮುಜುಗರವನ್ನು ತಪ್ಪಿಸಿಕೊಳ್ಳಲು ಮತ್ತು ಬಿಜೆಪಿ ವಿರುದ್ಧ ಸಂಘಟಿತ ಹೋರಾಟವನ್ನು ನಡೆಸುವುದು... ಇದೆಲ್ಲ ಚರ್ಚೆಯ ಪ್ರಮುಖ ಅಂಶಗಳಾಗಿವೆ ಎನ್ನಲಾಗಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article