ಮಂಗಳೂರಿನಲ್ಲಿ ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಮೊದಲ ದಿನ ನಗರದ ವಿವಿಧೆಡೆ ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ವಾಹನಗಳನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ರಾತ್ರಿ ಪಾಳಿಯ ಕೆಲಸ ಮುಗಿಸಿ ಮನೆ ಸೇರುವವರನ್ನೂ ಪೊಲೀಸರು ತಡೆದು ಅನಗತ್ಯ ತೊಂದರೆ ಕೊಡುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿವೆ.
ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹಾಗೂ ಇತರ ಹಿರಿಯ ಅಧಿಕಾರಿಗಳು ಚೆಕ್ ಪೋಸ್ಟ್‌ಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.