ರಾಜ್ಯದ ಪ್ರಭಾವಿ ಹಿಂದೂ ಮುಖಂಡ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಅವಹೇಳನ ಮಾಡುವ ವೀಡಿಯೋವನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ಅವರ ಫೋಟೋಗಳನ್ನು ಕಲೆ ಹಾಕಿ ಹಿಂದಿ ಹಾಡಿಗೆ ಸರಿ ಹೊಂದುವಂತೆ ಸಂಕಲನ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ.
ವೀಡಿಯೋ ಅಪ್ ಲೋಡ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳದ ಭಜರಂಗ ದಳ ಮುಖಂಡ ಹಾಗೂ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.
ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ಈ ವೀಡಿಯೋ ಸೃಷ್ಟಿಸಲಾಗಿದೆ ಎಂದು ಆರೋಪಿಸಲಾಗಿದೆ.