
Kokkada Programme | ಕೊಕ್ಕಡದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಜನ್ಮ ದಿನಾಚರಣೆ
4/16/2021 11:20:00 AM
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 130 ನೇ ಜನ್ಮ ದಿನಾಚರಣೆಯನ್ನು
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳ್ಳಿಂಗೇರಿ, ಕೊಕ್ಕಡ ಇಲ್ಲಿ ದೇಶಕ್ಕೆ ಆವರಿಸಿದ ಮಹಾ ಮಾರಿ ಕೊರಾನ ಹಿನ್ನೆಲೆಯಲ್ಲಿ ಅತ್ಯಂತ ಸರಳ ರೀತಿಯಲ್ಲಿ ಅಚರಿಸಲಾಯಿತು.
ಶಾಲಾ ಮುಖ್ಯ ಶಿಕ್ಷಕರಾದ ಶ್ರೀಧರ್ ಕೆ.ಎಸ್ ರವರು ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಉಮ್ಮರ್ ಹಳ್ಳಿಂಗೇರಿ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.