ಎಪ್ರಿಲ್ 28ರಿಂದ ರಾಜ್ಯಾದ್ಯಂತ ಲಾಕ್‌ಡೌನ್
ಮಂಗಳೂರಿನಲ್ಲಿ ಮುಂಜಾಗ್ರತಾ ಕ್ರಮ, ಭದ್ರತೆ
ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ
ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಾಗಿದೆ. ಕರಾವಳಿ ನಗರಿ ಮಂಗಳೂರಿನಲ್ಲೂ ಕೊರೋನಾ ವ್ಯಾಪಿಸದಂತೆ ತಡೆಯಲು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಮಧ್ಯೆ, ಇಂದಿನಿಂದ ಲಾಕ್‌ಡೌನ್ ಕಟ್ಟುನಿಟ್ಟಾಗಿ ಜಾರಿಯಾಗಿದೆ.
ಭದ್ರತಾ ಕ್ರಮಗಳ ಬಗ್ಗೆ ವಿವರ ನೀಡಿರುವ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಸಾರ್ವಜನಿಕರ ಸಹಕಾರವನ್ನು ಯಾಚಿಸಿದ್ದಾರೆ.
ಕೊರೋನಾ ತಡೆಗಟ್ಟಲು ಎಲ್ಲರೂ ಕೈಜೋಡಿಸಬೇಕು. ಪೊಲೀಸರೂ ಇದೇ ಕಾರ್ಯದಲ್ಲಿ ಇದ್ದು, ಅಗತ್ಯವಿದ್ದರೆ ಮಾತ್ರ ಬೀದಿಗಿಳಿಯಬೇಕು. ಅನಗತ್ಯವಾಗಿ ಸಂಚರಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.