-->

Raveendra Shetty Ulidottu | ಡೇರೆ ಮುಕ್ತ ಕರ್ನಾಟಕ ನನ್ನ ಗುರಿ: ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು

Raveendra Shetty Ulidottu | ಡೇರೆ ಮುಕ್ತ ಕರ್ನಾಟಕ ನನ್ನ ಗುರಿ: ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು




  • ಅಲೆಮಾರಿ ಹಾಗೂ ಅಲೆ ಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಅವರಿಗೆ ಅದ್ದೂರಿ ಸ್ವಾಗತ
  • ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಿದ ಬೆಂಬಲಿಗರು, ಪಕ್ಷದ ಕಾರ್ಯಕರ್ತರು
  • ಅರೆ ಅಲೆಮಾರಿ, ಅಲೆಮಾರಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ
  • ಡೇರೆ ಮುಕ್ತ ಕರ್ನಾಟಕ ನನ್ನ ಗುರಿ: ಅಲೆಮಾರಿ ನಿಗಮ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು


ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ಒದಗಿಸಿ ರಾಜ್ಯವನ್ನು ಡೇರೆ ಮುಕ್ತ ಕರ್ನಾಟಕ ಎಂಬ ಹೆಮ್ಮೆಗೆ ಪಾತ್ರವಾಗಿಸುವುದೇ ನನ್ನ ಗುರಿ ಎಂದು ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ.


ನಿಗಮ ಅಧ್ಯಕ್ಷರಾಗಿ ರಾಜ್ಯ ಸಚಿವ ಸ್ಥಾನಮಾನದ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ತವರಿಗೆ ಆಗಮಿಸಿದ ಅವರನ್ನು ವಿಮಾನ ನಿಲ್ದಾಣದಲ್ಲಿ ಅದ್ದರಿಯಾಗಿ ಸ್ವಾಗತಿಸಲಾಯಿತು.













ಅಲ್ಲಿ ಅವರು ಮಾಧ್ಯಮದ ಜೊತೆ ಈ ವಿಷಯ ಹಂಚಿಕೊಂಡರು. ರಾಜ್ಯ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿಗಮದ ಮೊದಲ ಅಧ್ಯಕ್ಷರಾಗಿ ಮೂರು ತಿಂಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದೇನೆ. ಈಗಾಗಲೇ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಈ ಸಮದಾಯದ ಜನರ ಕಷ್ಟ ಸುಖ ಕೇಳಿದ್ದೇನೆ ಎಂದು ಹೇಳಿದ ಅವರು, ಇದೀಗ ರಾಜ್ಯ ಸರ್ಕಾರ ನನಗೆ ಸಚಿವ ದರ್ಜೆಯ ಸ್ಥಾನಮಾನ ನೀಡಿದೆ. ಉಳಿದ ಅವಧಿಯುದ್ದಕ್ಕೂ ಅಲೆಮಾರಿ ಹಾಗೂ ಸಮುದಾಯದ ಜನರ ಅಹವಾಲು ಆಲಿಸಿ ಅವರ ಸಮಸ್ಯೆಗೆ ಸ್ಪಂದಿಸುತ್ತೇನೆ ಎಂದು ಹೇಳಿದರು.


ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕನಸಿನ ಕೂಸು. ಧ್ವನಿ ಇಲ್ಲದವರಿಗೆಧ್ವನಿ ನೀಡುವ ಪ್ರಯತ್ನವನ್ನು ನಾವು ಈ ನಿಗಮದ ಮೂಲಕ ಮಾಡುತ್ತೇನೆ ಎಂದು ಅವರು ಪಣ ತೊಟ್ಟರು.



ರಾಜ್ಯದಲ್ಲಿ 46 ಜಾತಿಗಲು ಈ ನಿಗಮದ ವ್ಯಾಪ್ತಿಗೆ ಬರುತ್ತವೆ. ಈ ಪೈಕಿ ಶೇ. 90ರಷ್ಟು ಮಂದಿ ಶೋಚನೀಯ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಮೂಲ ಸೌಲಭ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸಿ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ನಡೆಸಲಾಗುವುದು ಮತ್ತು ಅವರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಹೇಳಿದರು..


Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article