-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Bhaskar Mayya expired | ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಭಾಸ್ಕರ ಮಯ್ಯ ಇನ್ನಿಲ್ಲ

Bhaskar Mayya expired | ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಭಾಸ್ಕರ ಮಯ್ಯ ಇನ್ನಿಲ್ಲ





ಹಿರಿಯ ವೈಚಾರಿಕ ಸಾಹಿತಿ ಉಡುಪಿಯ ಡಾ. ಜಿ. ಭಾಸ್ಕರ ಮಯ್ಯ ಅವರು ನಿಧನರಾಗಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೋವಿಡ್‌ಗೆ ಬಲಿಯಾಗಿದ್ದಾರೆ.


ಈ ಮೂಲಕ ರಾಜ್ಯದ ವೈಚಾರಿಕ ಸಾಹಿತ್ಯದ ಮೇರು ಕೊಂಡಿಯೊಂದು ಕಳಚಿಕೊಂಡಂತಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ಭಾಸ್ಕರ ಮಯ್ಯ, ರಾಜ್ಯದ ವೈಚಾರಿಕ ಸಾಹಿತಿಯಾಗಿ ಗುರುತಿಸಿಕೊಂಡಿದ್ಧಾರೆ.


ಡಾ.ಜಿ.ಭಾಸ್ಕರ್ ಮಯ್ಯ ಅವರಿಗೆ 70 ವರ್ಷ ವಯಸ್ಸಾಗಿತ್ತು. ಉಡುಪಿ ಜಿಲ್ಲೆ ಸಾಲಿಗ್ರಾಮದ ಪ್ರಣವ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.


ಶುಕ್ರವಾರ ಮುಂಜಾನೆ ಸುಮಾರು 4:30ಕ್ಕೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿದ್ದಾರೆ.


ಹಿಂದಿ ಸಾಹಿತ್ಯ ಅಧ್ಯಯನದಲ್ಲಿ ಪ್ರಭುತ್ವ ಹೊಂದಿದ್ದ ಡಾ.ಜಿ.ಭಾಸ್ಕರ್ ಮಯ್ಯ ತಮ್ಮ ವೈಚಾರಿಕ ಕೃತಿಗೆ ಕೇಂದ್ರ ಸರ್ಕಾರ 2004ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿತ್ತು.


ಪ್ರೊಫೆಸರ್ ಆಗಿ ವೃತ್ತಿಜೀವನದಲ್ಲಿ ತೊಡಗಿದ್ದ ಅವರು ಸುದೀರ್ಘಕಾಲ ಕುಂದಾಪುರದ ಭಂಡಾರ್ಸ್ ಕಾರ್ಸ್ ಕಾಲೇಜಿನಲ್ಲಿ ಹಿಂದಿ ಪ್ರೊಫೆಸರ್ ಆಗಿ ಸೇವೆ ಸಲ್ಲಿಸಿದ್ದರು. ವೈಚಾರಿಕ ಮತ್ತು ಪ್ರಗತಿಪರ ಸಾಹಿತ್ಯಕ್ಕೆ ಸಂಬಂಧಿಸಿದಂತೆ 50ಕ್ಕೂ ಹೆಚ್ಚು ಗ್ರಂಥ ರಚಿಸಿದ್ದ ಭಾಸ್ಕರ ಮಯ್ಯ ಅವರ ನಿಧನಕ್ಕೆ ಸಾಹಿತ್ಯ ಲೋಕ ಕಂಬನಿ ಮಿಡಿದಿದೆ.

Ads on article

Advertise in articles 1

advertising articles 2

Advertise under the article