-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Chamrajnagara incident reaction | ಚಾಮರಾಜನಗರ ಘಟನೆ ಸರಕಾರದ ವೈಫಲ್ಯಕ್ಕೆ ಕೈಗನ್ನಡಿ: ಹರೀಶ್ ಕುಮಾರ್

Chamrajnagara incident reaction | ಚಾಮರಾಜನಗರ ಘಟನೆ ಸರಕಾರದ ವೈಫಲ್ಯಕ್ಕೆ ಕೈಗನ್ನಡಿ: ಹರೀಶ್ ಕುಮಾರ್





ಮಂಗಳೂರು: ಕೋವಿಡ್-19 ನಿಯಂತ್ರಿಸುವಲ್ಲಿ ರಾಜ್ಯ ಸಕಾರ ಸಂಪೂರ್ಣ ವೈಫಲ್ಯವಾಗಿರುವುದಕ್ಕೆ ಚಾಮರಾಜದಲ್ಲಿ ಆಕ್ಸಿಜನ್ ಇಲ್ಲದೆ 24ಮಂದಿ ರೋಗಿಗಳು ಸಾವನ್ನಪ್ಪಿರುವುದು ಕೈಗನ್ನಡಿ. ನಿಜಕ್ಕೂ ಇದೊಂದು ದುರಂತ ಹಾಗೂ ನಾಚಿಕೆಗೇಡಿನ ಸಂಗತಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.



ದೇಶದಲ್ಲಿ ಕೋವಿಡ್ ಎರಡನೇ ಅಲೆಯ ಬಗ್ಗೆ ಡಿಸೆಂಬರ್‌ನಲ್ಲೇ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದರು. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಬೇಕಾದ ಮೂಲಸೌಕರ್ಯ ಮಾಡಬೇಕಿತ್ತು. ಆದರೆ ಆಡಳಿತದ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ ಕೋವಿಡ್ ಗಣನೀಯವಾಗಿ ಏರಿಕೆಯಾಗಿದ್ದು, ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಕಾಡುತ್ತಿದೆ. ಚಾಮರಾಜನಗದಲ್ಲಿ ಒಂದೇ ದಿನದಲ್ಲಿ 24ಮಂದಿ ಆಕ್ಸಿಜನ್ ಸಿಗದೆ ಮೃತಪಟ್ಟಿರುವುದು ಬೇಸರದ ಸಂಗತಿ. ಕೂಡಲೇ ಇದನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ ಇನ್ನು ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕಾಗಿದೆ ಎಂದರು.



ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಈಗಾಗಲೇ ಕೆಲವು ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಸಮಸ್ಯೆ ಎದುರಾಗಿದೆ. ಇದೇ ರೀತಿ ಮುಂದುವರಿದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಬೆಂಗಳೂರು, ಚಾಮರಾಜನಗರ ಪರಿಸ್ಥಿತಿ ಬರಬಹುದು. ಜಿಲ್ಲಾಡಳಿತ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ವ್ಯವಸ್ಥೆ ಮಾಡಬೇಕು. ಜನರ ಸಂಕಷ್ಟಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುವ ಕೆಲಸವನ್ನು ಆಡಳಿತ ಮಾಡಲಿ ಎಂದರು.


ರಾಜ್ಯ ಸರಕಾರ ಕೋವಿಡ್ ಮಾರ್ಗಸೂಚಿಯನ್ನು ಹೊರಡಿಸಿದ್ದು, ಜಿಲ್ಲೆಯ ಜನರು ಪ್ರಸ್ತುತ ಪರಿಸ್ಥಿತಿಯನ್ನು ಮನಗಂಡು ಆರೋಗ್ಯ ದೃಷ್ಟಿಯಿಂದ ಹೆಚ್ಚಿನ ಜಾಗೃತಿವಹಿಸಬೇಕಾಗಿದೆ. ಪ್ರತಿಯೊಬ್ಬರೂ ಸರಕಾರ, ಜಿಲ್ಲಾಡಳಿತ ಸೂಚನೆಯನ್ನು ಪಾಲಿಸಿಕೊಂಡು ಸಹಕಾರ ನೀಡಿದಾಗ ಮಾತ್ರ ಕೋವಿಡ್ ಮಾಹಾಮಾರಿಯನ್ನು ನಿಗ್ರಹಿಸಲು ಸಾಧ್ಯವಿದೆ ಎಂದು ಹರೀಶ್ ಕುಮಾರ್ ಹೇಳಿದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article