-->

DC visit Shillekyatha camp- ಅಲೆಮಾರಿ ಶಿಳ್ಳೆಕ್ಯಾತ ಗುಡಿಸಲಿಗೆ ರವೀಂದ್ರ ಶೆಟ್ಟಿ ಉಳಿದೊಟ್ಟು, ದ.ಕ ಡಿಸಿ ಡಾ. ರಾಜೇಂದ್ರ ಭೇಟಿ

DC visit Shillekyatha camp- ಅಲೆಮಾರಿ ಶಿಳ್ಳೆಕ್ಯಾತ ಗುಡಿಸಲಿಗೆ ರವೀಂದ್ರ ಶೆಟ್ಟಿ ಉಳಿದೊಟ್ಟು, ದ.ಕ ಡಿಸಿ ಡಾ. ರಾಜೇಂದ್ರ ಭೇಟಿ





ಮಂಗಳೂರಿನ ಹೊಯಿಗೆ ಬಜಾರ್ ನ ನೇತ್ರಾವತಿ ನದಿ ತೀರದಲ್ಲಿ ಟೆಂಟ್ ಗಳಲ್ಲಿ ಬದುಕುತ್ತಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳು ಇತ್ತೀಚೆಗೆ ತೌಕ್ತೆ ಚಂಡಮಾರುತದ ಪರಿಣಾಮದಿಂದಾಗಿ ಟೆಂಟ್ ಗಳು ಹಾರಿ ಹೋಗಿ ಹಲವು ಸಮಸ್ಯೆಗಳನ್ನು ಅನುಭವಿಸಿದ್ದರು.


ಮಾತ್ರವಲ್ಲದೆ ಕೋರೋನಾ ರೋಗದ ಈ ಕಾಲಘಟ್ಟದಲ್ಲಿ ಉಂಟಾದ ಸಮಸ್ಯೆ ಮತ್ತು ಲಾಕ್ಡೌನ್ ನಿಂದಾಗಿ ಒಂದೊತ್ತಿನ ಊಟಕ್ಕೂ ಪಡಿತರ ಇಲ್ಲದೆ ಪರದಾಡುತ್ತಿದ್ದ ಈ ಸಮುದಾಯಕ್ಕೆ ಆಹಾರ ಸಾಮಾಗ್ರಿ ಸಹಿತ ಆರ್ಥಿಕ ಪರಿಹಾರ ನೀಡಬೇಕೆಂದು ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿತ್ತು.


ಈ ಬಗ್ಗೆ ಗಮನಹರಿಸಿದ ದ.ಕ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಅವರು ಇಂದು 25-05-2021 ರ ಮಂಗಳವಾರ ಹೊಯಿಗೆಬಜಾರಿನ ಶಿಳ್ಳೆಕ್ಯಾತ ಅಲೆಮಾರಿ ಜನಾಂಗದವರು ವಾಸಿಸುತ್ತಿರುವ ಕ್ಯಾಂಪ್ ಗೆ ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿದರು. ಶಿಳ್ಳೆಕ್ಯಾತ ಕುಟುಂಬಗಳಿಗೆ ಬೇಕಾಗಿರುವ ಪಡಿತರ ಆಹಾರ ಸಾಮಾಗ್ರಿಗಳನ್ನು ಒದಗಿಸಿಕೊಡಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಿದರು.





ಅದೇ ರೀತಿ ಸೊಳ್ಳೆ ಪರದೆಗಳನ್ನು ವಿತರಿಸಲು ಹಾಗೂ ಎಲ್ಲರ ಆರೋಗ್ಯ ತಪಾಸಣೆ ನಡೆಸಲು ಸೂಚಿಸಿದರು. ವಸತಿ, ವಿದ್ಯುತ್, ದಾರಿ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಮುಂದಿನ ದಿನ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.


ಈ ವೇಳೆ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ. ರವೀಂದ್ರ ಶೆಟ್ಟಿ , ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷರು ಸಂತೋಷ್ ಬಜಾಲ್ , ಅಲೆಮಾರಿ ನಿಗಮದ ಅಧಿಕಾರಿ ಸೋಮಪ್ಪ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article