ಮಂಗಳೂರು: ವ್ಯಾಪಿಸುತ್ತಿರುವ ಕೋವಿಡ್ ಸೋಂಕು ಹಾಗೂ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‌ಡೌನ್‌ನಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ಜೊತೆ ರೈತರೂ ಸಂಕಷ್ಟಕ್ಕೀಡಾಗಿದ್ದಾರೆ.
ವ್ಯಾಪಾರ ವಹಿವಾಟು ಬಂದ್ ಆಗಿದ್ದು, ಸಹಕಾರ ಸಂಘಗಳು, ವಾಣಿಜ್ಯ ಬ್ಯಾಂಕ್‌ಗಳಿಂದ ರೈತರು ಪಡೆದ ಸಾಲ ತೀರಿಸಲು ರೈತರು ಹೆಣಗಾಡುತ್ತಿದ್ದಾರೆ.
ಇದರಿಂದ ರೈತರು ಪಡೆದ ಕೃಷಿ ಸಾಲದ ಅವಧಿಯನ್ನು ಇನ್ನೂ ಒಂದು ವರ್ಷದ ಮಟ್ಟಿಗೆ ವಿಸ್ತರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಒತ್ತಾಯಿಸಿದ್ದಾರೆ.
ಕೃಷಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಕುಂಠಿತಗೊಂಡ ಕೃಷಿ ಕ್ಷೇತ್ರದ ಉತ್ತೇಜನಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದೇ ವೇಳೆ, ರೈತರು ಬೆಳೆದಿರುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಒದಗಿಸಲು ರಾಜ್ಯ ಸರ್ಕಾರ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
