-->

Doreswamy died at 104- ನಾಡಿನ ಸಾಕ್ಷಿಪ್ರಜ್ಞೆಯ ಚೇತನ, ಶತಾಯುಷಿ, ಸ್ವಾತಂತ್ಯ ಹೋರಾಟಗಾರ ದೊರೆಸ್ವಾಮಿ ಅಸ್ತಂಗತ

Doreswamy died at 104- ನಾಡಿನ ಸಾಕ್ಷಿಪ್ರಜ್ಞೆಯ ಚೇತನ, ಶತಾಯುಷಿ, ಸ್ವಾತಂತ್ಯ ಹೋರಾಟಗಾರ ದೊರೆಸ್ವಾಮಿ ಅಸ್ತಂಗತ





ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಪೂರ್ಣ ಹೆಸರು ಹಾರೋಹಳ್ಳಿ ಶ್ರೀನಿವಾಸ ದೊರೆಸ್ವಾಮಿ.


ಕೆಲವು ದಿನಗಳ ಹಿಂದಷ್ಟೇ ಕೋವಿಡ್ ಸೋಂಕಿನ ವಿರುದ್ಧ ಹೋರಾಟವನ್ನು ಯಶಸ್ವಿಯಾಗಿ ನಡೆಸಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.


ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕಿನ ಒಳಗಾಗಿದ್ದ ದೊರೆಸ್ವಾಮಿ ಅವರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅಧಿಕ ರಕ್ತದೊತ್ತಡ, ಬ್ರಾಂಕೈಟಿಸ್ ಸಹಿತ ವಿವಿಧ ಆರೋಗ್ಯ ಸಮಸ್ಯೆಗಳನ್ನು ಅವರು ಎದುರಿಸಿದ್ದರು.


ಆದರೆ, ಏಳು ದಿನಗಳ ಕಾಲ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚೇತರಿಕೆ ಬಳಿಕ ಬಿಡುಗಡೆಗೊಂಡಿದ್ದ ಅವರು ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದರು.


ಈ ನಾಡಿನ ಸಾಕ್ಷಿಪ್ರಜ್ಞೆ, ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ ಅವರ ನಿಧನಕ್ಕೆ ರಾಜ್ಯವೇ ಕಂಬನಿ ಮಿಡಿದಿದೆ. ದೊರೆಸ್ವಾಮಿ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.


ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಡಿ.ಕೆ. .ಶಿವಕುಮಾರ್, ಬಿಜೆಪಿ ನಾಯಕ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ದೊರೆಸ್ವಾಮಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.


ನಾಡಿನ ಹೆಮ್ಮೆಯ ಚೇತನ ದೊರೆಸ್ವಾಮಿ ನಿಧನಕ್ಕೆ ಕೆಯುಡಬ್ಲ್ಯೂಜೆ ಸಂತಾಪ


ನಮ್ಮ ನಡುವೆ ಆತ್ಮಸಾಕ್ಷಿಯಂತಿದ್ದ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಕೋವಿಡ್ ಸೋಂಕು ಗೆದ್ದು ಬಂದಿದ್ದು ಸಂತೋಷವಾಗಿತ್ತು. ದುರಾದೃಷ್ಟವಶಾತ್ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದು ನೋವಿನ ಸಂಗತಿ.





ದೊರೆಸ್ವಾಮಿ ಅವರು ಸ್ವತಃ ಪತ್ರಕರ್ತರಾಗಿ, ಹೋರಾಟಗಾರರಾಗಿ ಸಾರ್ವಜನಿಕ ಬದುಕಿನಲ್ಲಿ ಗಮನಸೆಳೆದ ನಾಡಿನ ಹೆಮ್ಮೆಯ ವ್ಯಕ್ತಿತ್ವ ಅವರದು.


ಒಂದು ಅವಧಿಗೆ ದೊರೆಸ್ವಾಮಿ ಅವರು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಕೂಡ ಅಭಿಮಾನದ ಸಂಗತಿ.


ಸುದೀರ್ಘ ಅವಧಿ ಸೇವೆ ಸ್ಮರಿಸಿ, ಮೈಸೂರಿನ ಸುತ್ತೂರಿನಲ್ಲಿ ನಡೆದ 34ನೇ ಕೆಯುಡಬ್ಲ್ಯೂಜೆ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಶತಾಯುಷಿಗಳಾದ ಎಚ್.ಎಸ್. ದೊರೆಸ್ವಾಮಿ ಅವರನ್ನು ಅಭಿಮಾನದಿಂದ ಅಭಿನಂದಿಸಲಾಗಿತ್ತು.


ಹಿರಿಯ ಚೇತನ ದೊರೆಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಪ್ರಾರ್ಥಿಸಿದ್ದಾರೆ.


Ads on article

Advertise in articles 1

advertising articles 2

Advertise under the article