Laxadweepa- ಲಕ್ಷದ್ವೀಪ ನಿವಾಸಿಗಳ ಬೆಂಬಲಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ; ಕೇಂದ್ರಕ್ಕೆ ಸೆಡ್ಡು ಹೊಡೆದ ಪಿಣರಾಯಿ





ತಿರುವನಂತಪುರ: ಲಕ್ಷದ್ವೀಪದ ಆಡಳಿತಾಧಿಕಾರಿ ಕೈಗೊಂಡಿರುವ ಕ್ರಮಗಳ ವಿರುದ್ಧ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದು, ಅಲ್ಲಿನ ನಿವಾಸಿಗಳಿಗೆ ಬೆಂಬಲ ನೀಡುವ ಸಂಬಂಧ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸೋಮವಾರ ಕೇರಳ ವಿಧಾನಸಭೆಯಲ್ಲಿ ನಿರ್ಣಯವನ್ನು ಮಂಡಿಸಿದರು.



ದ್ವೀಪ ಸಮೂಹದ ಸ್ಥಳೀಯ ನಿವಾಸಿಗಳ ಜೀವನ ಶೈಲಿ ಮತ್ತು ಪರಿಸರ ವ್ಯವಸ್ಥೆಯನ್ನು ನಾಶ ಮಾಡುವ ಮತ್ತು ಹಿಂಬಾಗಿಲಿನ ಮೂಲಕ 'ಕೇಸರಿ ಪಡೆಯ ಕಾರ್ಯಸೂಚಿಯನ್ನು' ಜಾರಿಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ಣಯ ಮಂಡಿಸುವ ಸಂದರ್ಭದಲ್ಲಿ ಅವರು ಹೇಳಿದರು.



"ತಮ್ಮ ಅಜೆಂಡಾದ ಭಾಗವಾಗಿ ತೆಂಗಿನ ಮರಗಳನ್ನು ಕೇಸರಿ ಬಣ್ಣದಿಂದ ಚಿತ್ರಿಸಲಾಗಿದೆ. ಈ ಪ್ರಯತ್ನಗಳು ಲಕ್ಷದ್ವೀಪದಲ್ಲಿ ತಮ್ಮ ಕೇಸರಿ ಅಜೆಂಡಾ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಹಿತಾಸಕ್ತಿಗಳನ್ನು ಒತ್ತಾಯಪೂರ್ವಕವಾಗಿ ಹೇರುವುದಾಗಿದೆ" ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu