Lady PSI succumb to Covid- ಮಂಗಳೂರಿನ ಪ್ರೊಬೇಷನರಿ ಮಹಿಳಾ ಸಬ್‌ ಇನ್ಸ್‌ಪೆಕ್ಟರ್ ಕೊರೋನಾಕ್ಕೆ ಬಲಿ





ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ವೃತ್ತಿಜೀವನ ಆರಂಭಿಸಿರುವ ಯುವ ಅಧಿಕಾರಿ ಶಾಮಿಲಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.



ಐದು ತಿಂಗಳ ಹಿಂದಷ್ಟೇ ಪೊಲೀಸ್ ಇಲಾಖೆ ಸೇರಿದ್ದ ಶಾಮಿಲಿ ದಕ್ಷ ಮತ್ತು ಪ್ರಾಮಾಣಿಕತೆಯ ಸೇವೆ ಸಲ್ಲಿಸುವ ಕನಸು ಕಂಡಿದ್ದರು. 24 ವರ್ಷ ವಯಸ್ಸಿನ ಶಾಮಿಲಿ ಮೂಲತಃ ಕೋಲಾರ ಜಿಲ್ಲೆಯ ನಿವಾಸಿಯಾಗಿದ್ದಾರೆ.



ಏಳು ತಿಂಗಳ ಗರ್ಭಿಣಿಯಾಗಿದ್ದ ಶಾಮಿಲಿ ಅವರಿಗೆ ಮೇ 2ರಂದು ಕೋವಿಡ್ ಸೋಂಕು ತಗುಲಿತ್ತು. ಅವರನ್ನು ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ಸೇರಿಸಲಾಗಿತ್ತು. 



ಅವರ ಚಿಕಿತ್ಸೆಗೆ ವೈದ್ಯರು ಆದ್ಯ ಗಮನ ನೀಡಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಮ್ಮ ಹೇಳಿಕೆಯಲ್ಲಿ ವಿಷಾದ ವ್ಯಕ್ತಪಡಿಸಿದ್ಧಾರೆ.





2021ರ ಜನವರಿ 11ರಂದು ಶಾಮಿಲಿ ಅವರು ಪೊಲೀಸ್ ಇಲಾಖೆಯ ಸೇವೆಗೆ ಸೇರ್ಪಡೆಗೊಂಡಿದ್ದರು.


ಶಾಮಿಲಿ ಸಾವಿಗೆ ಸಂತಾಪ ಸೂಚಿಸಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಇಲಾಖೆಯ ಅತ್ಯಂತ ಕಿರಿಯ ಅಧಿಕಾರಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದು ನೋವು ತೋಡಿಕೊಂಡಿದ್ದಾರೆ.