-->

Mangaluru Ex Mayor criticize Tejasvi Surya | ಕೊರೋನಾ ನಿಯಂತ್ರಣ ವೈಫಲ್ಯ ಮತೀಯ ದ್ವೇಷಕ್ಕೆ ಪರಿವರ್ತನೆ: ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ

Mangaluru Ex Mayor criticize Tejasvi Surya | ಕೊರೋನಾ ನಿಯಂತ್ರಣ ವೈಫಲ್ಯ ಮತೀಯ ದ್ವೇಷಕ್ಕೆ ಪರಿವರ್ತನೆ: ತೇಜಸ್ವಿ ಸೂರ್ಯ ವಿರುದ್ಧ ಆಕ್ರೋಶ




ಕೊರೋನಾ ನಿಯಂತ್ರಣವನ್ನು ಮಾಡಲಾಗದೆ ಕೈ ಸೋತು ಹೋಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಡಲು ಮತ್ತು ಜನರ ಗಮನವನ್ನು ಬೇರೆ ಕಡೆ ಸೆಳೆಯಲು ಸಂಸದ ತೇಜಸ್ವಿ ಸೂರ್ಯ ಅವರು ಮತೀಯ ದ್ವೇಷ ಹರಡುವ ಪ್ರಯತ್ನಕ್ಕೆ ಕೈಹಾಕಿದ್ದಾರೆ ಎಂದು ಮಾಜಿ ಮೇಯರ್ ಕೆ. ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಕೊರೋನಾ ಸೋಂಕು ಪ್ರಸರಣವನ್ನು ನೆರೆರಾಜ್ಯ ಕೇರಳದಂತೆ ವೈಜ್ಞಾನಿಕ ಪರಿಹಾರ ಕೈಗೊಂಡು ನಿಭಾಯಿಸಲು ಆಗದೆ, 2ನೇ ಕೊರೋನಾ ಅಲೆ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯಾವ ಮುಂಜಾಗ್ರತೆ ವಹಿಸಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಆಕ್ಸಿಜನ್, ಹಾಸಿಗೆ, ಜೀವರಕ್ಷಕ ಔಷಧಗಳ ಪೂರೈಕೆ ಬಗ್ಗೆ ನಿಗಾ ವಹಿಸದೆ, ಸಂಭವನೀಯ ದುರಂತ, ವಿಪತ್ತುಗಳನ್ನು ಸಮರ್ಪಕವಾಗಿ ನಿಭಾಯಿಸ ಲಾಗದೆ, ಕೋರೋಣ ಸೋಂಕಿತ ರೋಗಿಗಳ ಆರೋಗ್ಯ ಜವಾಬ್ದಾರಿ ವಹಿಸಿಲ್ಲ ಎಂದು ಅವರು ದೂರಿದರು.


ರಾಜ್ಯ ಸರ್ಕಾರ ತನ್ನ ಆಡಳಿತ ವೈಫಲ್ಯತೆಯಿಂದ ಬೃಹತ್ ನಗರ ಪಾಲಿಕೆ ಬೆಂಗಳೂರು ವ್ಯಾಪ್ತಿ ಮತ್ತು ರಾಜ್ಯಾದ್ಯಂತ ನೂರಾರು ಸಂಖ್ಯೆಯಲ್ಲಿ ಸಾವು ನೋವುಗಳಿಗೆ ನೇರ ಕಾರಣರಾದ, ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಳಿಸಿ, ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಜನರಿಂದ ಛೀಮಾರಿ ಗೊಳಗಾಗಿದೆ.


ಇದರ ಜೊತೆಗೆ, ಮೂಲ ಸೌಕರ್ಯ, ಔಷದ, ಆಕ್ಸಿಜನ್ ಅನ್ನು ಕೇಂದ್ರದಿಂದ ರಾಜ್ಯಕ್ಕೆ ಪೂರೈಸಿ ಕೊಳ್ಳಲು ಅಸಮರ್ಥರಾದ ರಾಜ್ಯದ ಸರ್ವ ಸಂಸದರು ಮತ್ತು ಅದರಲ್ಲೂ ಮೋದಿಯನ್ನು ಓಲೈಸಲೆಂದೇ ಸಂಸತ್ ನಲ್ಲಿ ಆಂಗ್ಲ ಭಾಷೆಯಲ್ಲಿ ಹಾಡಿ ಹೊಗಳಿ ಅಟ್ಟ ಕ್ಕೇರಿಸಿದ ತೇಜಸ್ವಿ ಸೂರ್ಯ, ಕಳೆದ ಒಂದು ತಿಂಗಳಿನಿಂದೀಚೆಗೆ ಬೆಂಗಳೂರಿನಲ್ಲಿ ಕೋರೋಣದಿಂದ ಆಗುತ್ತಿರುವ ನೂರಾರು ಜನರ ಸಾವು ನೋವುಗಳ ದುರ್ಘಟನೆ ಗಳನ್ನು ಕಣ್ಣೆತ್ತಿಯೂ ನೋಡಿಲ್ಲ.

ಅ ಭಾಗಕ್ಕೆ ತಪ್ಪಿಯೂ ಕೂಡಾ ಬರದೆ, ದೂರವೇ ಉಳಿದಿದ್ದ ಸಂಸದರಾದ ಸೂರ್ಯ ನಾರಾಯಣ ತೇಜಸ್ವಿ ಆಲಿಯಾಸ್ ತೇಜಸ್ವಿ ಸೂರ್ಯ, ಇದೀಗ ಬಿ.ಬಿ.ಎಂ.ಪಿ. ಕೋರೋಣ ವಾರ್ ರೂಂನಲ್ಲಿ ಬಿ.ಬಿ.ಎಂ.ಪಿ. ಅಧಿಕಾರಿಗಳು ನಕಲಿ ರೋಗಿಗಳ ಹೆಸರು ನೊಂದಾಯಿಸಿ ಬೆಡ್ ಬ್ಲಾಕ್ ಗೊಳಿಸಿದ್ದಾರೆ ಎಂಬ ಆರೋಪ ಮಾಡಿದ್ದಾರೆ. ಬಿಜೆಪಿ ಆಡಳಿತದ ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಹಿರಂಗವಾಗಿ ಪತ್ರಿಕಾ ಗೋಷ್ಠಿಯಲ್ಲಿ ಆರೋಪಿಸಿದ್ದಾರೆ.


ಈ ರೀತಿ ಹೀರೋಯಿಸಂ ಪ್ರದರ್ಶಿಸಿ ಪ್ರಸ್ತುತ ತನ್ನ ಪಕ್ಷದ ಸರ್ಕಾರದ ವಿರುದ್ಧ ಜನಾಕ್ರೋಶ ಸೃಷ್ಟಿಯಾಗುವುದನ್ನು ತಡೆಯಲು ಪ್ರಯತ್ನಿಸಿ, ಈಗ ಬೆಡ್ ಬ್ಲಾಕ್ ಕೃತ್ಯದಲ್ಲಿ ದಾಖಲಾದ ಮುಸ್ಲಿಮ್ ವ್ಯಕ್ತಿಗಳ ಹೆಸರನ್ನು ವೈಭವೀಕರಿಸಿ, ಕೋವಿಡ್ ದುರಂತಕ್ಕೆ ಮುಸ್ಲಿಮರು ಕಾರಣ ಎಂಬ ರೀತಿಯಲ್ಲಿ ಹೇಳಿಕೆ ಕೊಟ್ಟು, ಮತೀಯ ಉದ್ವಿಗ್ನತೆಯನ್ನು ಸೃಷ್ಟಿಸಿ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುವ ತೇಜಸ್ವಿ ಸೂರ್ಯನ ವರ್ತನೆಗೆ ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತೀವ್ರ ಖಂಡನೆ ವ್ಯಕ್ತಪಡಿಸುತ್ತದೆ.


ಬಿ.ಬಿ.ಎಂ.ಪಿ.ಯಲ್ಲಿ ನಡೆದ ಬೆಡ್ ಬ್ಲಾಕ್ ಕೃತ್ಯದ ಬಗ್ಗೆ ತನ್ನದೇ ಸರಕಾರದ ಅಡಿಯಲ್ಲಿರುವ ಪೊಲೀಸು ಇಲಾಖೆ ಮುಖಾಂತರ ಸೂಕ್ತ ಮತ್ತು ಸಮಗ್ರ ತನಿಖೆ ನಡೆಸಲಿ ಮತ್ತು ತಪ್ಪಿತಸ್ಥರನ್ನು ಶಿಕ್ಷಿಸಲಿ, ಹಾಗೆಂದು ರೋಗಿಗಳ ನೋಂದಣಿ ಪಟ್ಟಿಯಲ್ಲಿ ಮುಸ್ಲಿಮ್ ಹೆಸರು ದಾಖಲಿದೆ ಎಂದು ಘಟನೆಯನ್ನು ಮತೀಯ ಉದ್ವಿಗ್ನತೆಗೆ ಪರಿವರ್ತಿಸಿದರೆ, ಈಗಾಗಲೇ ಆದ ಜೀವ ಹಾನಿಯೊಂದಿಗೆ, ಇತರ ಹಾನಿಗಳಾಗಬಹುದು. ಕರ್ನಾಟಕದ ಜನತೆ ಈಗಾಗಲೇ ನಿಮ್ಮ ಕೋಮು ದುಂಡಾ ವರ್ತನೆಯ ರಹಸ್ಯವನ್ನು ಅರ್ಥ ಮಾಡಿಕೊಂಡಿದ್ದಾರೆ ಎಂಬುದನ್ನು ನೀವು ಅರಿವು ಮಾಡಿಕೊಳ್ಳಿ. 


 ಪ್ರಸ್ತುತ ನಾವು ಎದುರಿಸುತ್ತಿರುವ ಸಂಕಷ್ಟವನ್ನೂ, ದುರಂತವನ್ನೂ ನಿಯಂತ್ರಿಸಲು ಪ್ರಯತ್ನಿಸಿ, ಹೊರತಾಗಿ ತಿನ್ನುವ ಅನ್ನದಿಂದ ಹಿಡಿದು ಉಸಿರಾಡುವ ಗಾಳಿ, ವಾತಾವರಣದ ಉಷ್ಣತೆವರೆಗೆ ಎಲ್ಲವನ್ನೂ ಕೋಮು ಮನಸ್ಥಿತಿ ಯಿಂದ ನೋಡುವ ನಿಮ್ಮ ಬಾಲಿಶ ವರ್ತನೆಗೆ ಖಂಡನೆಯಿರಲಿ ಎಂದು ಮಾಜಿ ಮೇಯರ್ ಕೆ. ಅಶ್ರಫ್ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article