ದಕ್ಷಿಣ ಕನ್ನಡದಲ್ಲಿ ಕೋವಿಡ್ ಲಸಿಕೆಗಳ ಡೋಸ್‌ಗಳು ಖಾಲಿಯಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಮುಂದಿನ ಎರಡು ದಿನಗಳ ಕಾಲ ಯಾವುದೇ ಲಸಿಕೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಕೋವಿಡ್ ಲಸಿಕೆ ಸ್ಟಾಕ್ ಇಲ್ಲದ ಕಾರಣ ಎರಡು ದಿನಗಳ ಕಾಲ ಲಸಿಕಾ ಅಭಿಯಾನ ಇರುವುದಿಲ್ಲ ಎಂದು ಇಲಾಖೆ ದೃಢಪಡಿಸಿದೆ.
ಈಗ ಪೂರೈಕೆಯಾಗಿರುವ ಲಸಿಕೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ. ಎರಡನೇ ಡೋಸ್ ಆಗಬೇಕಾಗಿರುವವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ.
ಪ್ರತಿದಿನ ವೆನ್ ಲಾಕ್ ಜಿಲ್ಲಾ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಲಸಿಕಾ ಶಿಬಿರ ನಡೆಯುತ್ತಿತ್ತು.
ಲಸಿಕೆ ಲಭ್ಯವಾದ ಇನ್ನೆರಡು ದಿನಗಳ ನಂತರ ಎಂದಿನಂತೆ ಲಸಿಕಾ ಅಭಿಯಾನ ಮುಂದುವರಿಯಲಿದೆ.
ಜನತೆ ಯಾವುದೇ ಧೃತಿಗೆಡದೆ ಕೋರೋನಾ ಮಹಾಮಾರಿಯನ್ನು ಎದುರಿಸಲು ಸರ್ಕಾರದ ಜೊತೆ ಕೈಜೋಡಿಸಬೇಕು ಎಂದು ಇಲಾಖೆ ವಿನಂತಿಸಿದೆ.
