Siddaramaiah- ಬಿಎಸ್‌ವೈ ಬಿಟ್ಟರೆ ಬಿಜೆಪಿಯಲ್ಲಿ ಮಾಸ್ ಲೀಡರ್ ಇಲ್ಲ- ಪ್ರತಿಪಕ್ಷ ನಾಯಕ ಸಿದ್ದು ಲೇವಡಿ




ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಟ್ಟರೆ ಬಿಜೆಪಿಗೆ ಗತಿ ಇಲ್ಲ. ಅವರನ್ನು ಬದಲಿಸಿದರೆ ಸರ್ಕಾರ ಬೀಳುತ್ತದೆ ಎಂದು ನಾನು ಹೇಳುವುದಿಲ್ಲ, ಆದರೆ ಪರ್ಯಾಯ ನಾಯಕತ್ವ ಬಿಜೆಪಿಯಲ್ಲಿ ಇಲ್ಲ ಎಂದು ಪ್ರತಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.



ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಬಿಟ್ಟರೆ ಬಿಜೆಪಿಯಲ್ಲಿ ಸಮರ್ಥ ನಾಯಕರೇ ಇಲ್ಲ ಎಂದು ಹೇಳಿದ್ದಾರೆ.



ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗಾಗಿ ಬೀದಿ ಕಾಳಗ ನಡೆಯುತ್ತಿದೆ. ಅವರ ಪಕ್ಷದ ಶಾಸಕರೇ ಯಡಿಯೂರಪ್ಪ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ನಾಯಕತ್ವ ಬದಲಾವಣೆಯಾದ ತಕ್ಷಣ ಸರ್ಕಾರ ಬಿದ್ದು ಹೋಗುವುದು ಖಚಿತ ಎಂದು ಅಂದುಕೊಳ್ಳುವುದಿಲ್ಲ. ಆದರೆ, ಅಲ್ಲಿ ಸಮರ್ಥ ಬದಲಿ ನಾಯಕರೇ ಇಲ್ಲ ಎಂದು ಅವರು ಹೇಳಿದರು.



ಯಡಿಯೂರಪ್ಪನವರನ್ನು ತೆಗೆದರೆ ಮತ್ತೊಬ್ಬ ಸಮರ್ಥ ನಾಯಕರು ಹೈಕಮಾಂಡ್ ಗೆ ಸಿಗುತ್ತಿಲ್ಲ, ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಸಮರ್ಥ ನಾಯಕರು ಯಾರೂ ಇಲ್ಲ, ಹೀಗಾಗಿ ಹೈಕಮಾಂಡ್ ಸುಮ್ಮನೆ ಕುಳಿತಿದೆ ಎಂದು ನನ್ನ ಭಾವನೆ ಎಂದು ಅವರು ಅಭಿಪ್ರಾಯಪಟ್ಟರು.



ಇನ್ನೂ ಕೊರೋನಾ ಮೂರನೇ ಅಲೆ ಅಕ್ಟೋಬರ್ -ನವೆಂಬರ್ ನಲ್ಲಿ ಬರುತ್ತದೆ ಎಂದು ತಜ್ಞರು ಹೇಳುತ್ತಿದ್ದಾರೆ, ಅದಕ್ಕೆ ಕೂಡ ಸರ್ಕಾರ ಸಿದ್ದತೆ ಮಾಡಿಕೊಂಡಂತೆ ಕಾಣುತ್ತಿಲ್ಲ. ಸರ್ಕಾರ ಸಮರ್ಪಕವಾಗಿ ಪರಿಸ್ಥಿತಿಯನ್ನು ನಿಭಾಯಿಸುತ್ತಿಲ್ಲ ಎಂದು ಆರೋಪಿಸಿದರು.

BREAKING NEWS
Loading latest news...
Join our WhatsApp Channel Powered By : Online Pudu