-->
govt announce journalists as covid frontline workers | ಪತ್ರಕರ್ತರು ಇನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್: ರಾಜ್ಯ ಸರ್ಕಾರ ಘೋಷಣೆ

govt announce journalists as covid frontline workers | ಪತ್ರಕರ್ತರು ಇನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್: ರಾಜ್ಯ ಸರ್ಕಾರ ಘೋಷಣೆಪತ್ರಕರ್ತರನ್ನು ಕೋವಿಡ್ ಫ್ರಂಟ್ ಲೈನ್ ವರ್ಕರ್ಸ್ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಢಿದೆ.


ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮನವಿಯನ್ನು ಪುರಸ್ಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಘೋಷಣೆ ಮಾಡಿದ್ದಾರೆ.


ಕೆಯುಡಬ್ಲ್ಯೂಜೆ ಅಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದಲ್ಲಿ ಪತ್ರಕರ್ತರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಈ ಬಗ್ಗೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಸಿಎಂ ಅವರು ಭರವಸೆ ನೀಡಿದ್ದಲ್ಲದೆ, ಈ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದಾರೆ. ನಿಯೋಗದಲ್ಲಿ ಪಬ್ಲಿಕ್ ಟಿವಿ ರವೀಶ್, ಪತ್ರಕರ್ತರಾದ ಯುಎನ್ ಐ ರಾಚಪ್ಪ, ಪ್ರಜಾ ಟಿವಿಯ ಅರುಣ್ ಕುಮಾರ್ ಮತ್ತಿತರರು ಹಾಜರಿದ್ದರು.


ಅಭಿನಂದನೆ:


ಕೆಯುಡಬ್ಲ್ಯೂಜೆ ಮನವಿ ಪರಿಗಣಿಸಿ ಈ ಕ್ರಮ ಕೈಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅಭಿನಂದಿಸಿದ್ದಾರೆ.

Ads on article

Advertise in articles 1

advertising articles 2

Advertise under the article

holige copy 1.jpg