
Nalin Lost his brother- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ಗೆ ಸಹೋದರ ವಿಯೋಗ
6/28/2021 10:37:00 AM
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಭಾತೃವಿಯೋಗ ಉಂಟಾಗಿದೆ.
ಅವರ ಸಹೋದರ ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವೀನ್ ಕುಮಾರ್ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು.
ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ನವೀನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ.
Naveen, brother of Nalin
ನವೀನ್ ವೃತ್ತಿಯಲ್ಲಿ ಕೃಷಿಕರೂ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು. ಅವರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್ ಕುಮಾರ್ ಕಟೀಲ್ ಹಾಗೂ ಸಹೋದರಿ ನಂದಿನಿ ಅವರನ್ನು ಅಗಲಿದ್ದಾರೆ.