Ravindra Shetty Ulidottu- ಯಡಿಯೂರಪ್ಪ ಬಿಜೆಪಿಯ ಪ್ರಶ್ನಾತೀತ ನಾಯಕ, ನಾಯಕತ್ವ ಬದಲಾವಣೆ ಅನಗತ್ಯ: ರವೀಂದ್ರ ಶೆಟ್ಟಿ ಉಳಿದೊಟ್ಟು


ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿಯ ಪ್ರಶ್ನಾತೀತ ನಾಯಕ ಮತ್ತು ಹುಟ್ಟು ಹೋರಾಟಗಾರ. ಅವರನ್ನು ಮುಖ್ಯಮಂತ್ರಿ ಪದವಿಯಿಂದ ತೆಗೆಯುವ ಹುನ್ನಾರ ಸರಿಯಲ್ಲ ಎಂದು ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದ್ದಾರೆ.



ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರ ಹೋರಾಟದ ನೆಲೆಯನ್ನು ನಾವು ಪರಿಗಣಿಸಿಬೇಕು. ರೈತರ ಪರ, ಕೃಷಿ ಕೂಲಿಕಾರ್ಮಿಕರ ಪರ, ದೀನ ದಲಿತರ ಪರ ನಿರಂತರವಾಗಿ ಹೋರಾಟ ನಡೆಸಿದ ಅವರು, ಪಕ್ಷವನ್ನು ರಾಜ್ಯದಲ್ಲಿ ಬಲಿಷ್ಟವಾಗಿ ಕಟ್ಟಿ ಬೆಳೆಸಿದವರು ಎಂದು ನೆನಪಿಸಿದರು.