-->
College Student Rape ; ಬಂಟ್ವಾಳ: ಕಾಲೇಜು ಯುವತಿಗೆ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ

College Student Rape ; ಬಂಟ್ವಾಳ: ಕಾಲೇಜು ಯುವತಿಗೆ ಚಿಕ್ಕಪ್ಪನಿಂದಲೇ ನಿರಂತರ ಅತ್ಯಾಚಾರ

ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿ ಬಂಟ್ವಾಳದ ನಗರ ಪೊಲೀಸ್ ಠಾಣೆಯಲ್ಲಿ ಪಾಪಿ ಚಿಕ್ಕಪ್ಪನ ವಿರುದ್ಧ ದೂರು ನೀಡಿದ್ದಾರೆ.


ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಪ್ರಕರಣದ ಆರೋಪಿ. ಈತ ತನ್ನ ಪತ್ನಿಯ ಅಕ್ಕನ ಮಗಳ ಮೇಲೆ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ. ಹಾಗಂತ ಅತ್ಯಾಚಾರಕ್ಕೆ ಒಳಗಾದ ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.


ಕಳೆದ ಒಂದು ವರ್ಷದಿಂದ ಯುವತಿ ಬಿ.ಸಿ. ರೋಡ್‌ನ ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದು, ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ ಎನ್ನಲಾಗಿದೆ. ಆವಾಗಿನಿಂದಲೇ ಸಂತ್ರಸ್ತೆ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ.


ಮನೆಯವರಿಗೆ ತಿಳಿಸಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ ಈತನ ಹಿಂಸೆ ತಾಳಲಾರದೆ ಸಂತ್ರಸ್ತೆ ಮನೆಯವರಿಗೆ ಮಾಹಿತಿ ನೀಡಿ ಆ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುವತಿ ನೀಡಿದ ದೂರಿನ ಪ್ರಕಾರ ಕೇಸು ದಾಖಲಿಸಲಾಗಿದೆ.

Ads on article

Advertise in articles 1

advertising articles 2

Advertise under the article