-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
Covid helping hand by ex Minister- ಲಾಕ್ ಡೌನ್ ಸಂತ್ರಸ್ತರಿಗೆ ಊಟದ ವ್ಯವಸ್ಥೆ: ಮಾಜಿ ಸಚಿವರ ಮಾನವೀಯ ಸೇವೆ

Covid helping hand by ex Minister- ಲಾಕ್ ಡೌನ್ ಸಂತ್ರಸ್ತರಿಗೆ ಊಟದ ವ್ಯವಸ್ಥೆ: ಮಾಜಿ ಸಚಿವರ ಮಾನವೀಯ ಸೇವೆ




ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಲಾಕ್‌ಡೌನ್ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವಲ್ಲಿ ಮಾಜಿ ಸಚಿವ ರಮಾನಾಥ ರೈ ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ. ಜೀವನವೇ ದುಸ್ತರ ಎನ್ನುವಂತೆ ಜನ ಕಂಗಾಲಾಗಿರುವಾಗ ಮಾಜಿ ಸಚಿವರ ಮಾನವೀಯ ಸೇವೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.





ಕೋವಿಡ್ ಚಟುವಟಿಕೆಯಲ್ಲಿ ನಿರತರಾಗಿರುವ ಆಶಾ ಕಾರ್ಯಕರ್ತರಿಗೆ ದಿನಸಿ ಕಿಟ್ ನೀಡಿರುವ ರೈ, ಹಲವು ತಿಂಗಳಿನಿಂದ ವೇತನ ಇಲ್ಲದೆ ಪರದಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿದ್ದಾರೆ.



ಇನ್ನು ಬಿ.ಸಿ.ರೋಡ್, ಪಾಣೆಮಂಗಳೂರು ಸೇರಿದಂತೆ ಹಲವೆಡೆ ಉಚಿತ ಊಟ ಹಾಗೂ ಉಪಹಾರದ ವ್ಯವಸ್ಥೆಯನ್ನೂ ಮಾಡಿದ್ಧಾರೆ.









ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಆಟೋ ರಿಕ್ಷಾ ಚಾಲಕರು ಹೀಗೆ ಎಲ್ಲ ವಿಭಾಗದವರ ಸಂಕಷ್ಟಗಳಿಗೂ ಅವರು ಸ್ಪಂದಿಸಿ ತಮ್ಮ ಕೈಯಿಂದ ಸಾಧ್ಯವಿರುವ ಎಲ್ಲ ನೆರವನ್ನೂ ನೀಡುತ್ತಿದ್ದಾರೆ. 




ಪಕ್ಷಭೇದ ಮರೆತು ರಮಾನಾಥ ರೈ ಅವರು ಮಾಡುತ್ತಿರುವ ಬಿಡುವಿಲ್ಲದ ಸಾಮಾಜಿಕ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.






Ads on article

Advertise in articles 1

advertising articles 2

Advertise under the article