ದೇಶದಲ್ಲಿ ಪ್ರತಿ ದಿನ ತಲಾ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಯೋಗ ಶುಕ್ರವಾರ ಮಾಡಿತು.
ಮಾಜಿ ಸಚಿವ ರಮಾನಾಥ ರೈ ಹಾಗೂ ಜಿಲ್ಲಾಧ್ಯಕ್ಷರಾದ ಶಾಸಕ ಹರೀಶ್ ಕುಮಾರ್ ನೇತೃ ನೇತೃತ್ವದ ಕಾಂಗ್ರೆಸ್ ನಿಯೋಗ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರನ್ನು ಭೇಟಿ ಮಾಡಿ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಸಚಿವ ಹಾಗೂ ಶಾಸಕ ಯು. ಟಿ. ಖಾದರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಟಿ.ಕೆ. ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.


