Gold Man- "ಚಿನ್ನದ ಮನುಷ್ಯ" ಕುಂಜಾಲ್ ಪಟೇಲ್ ನಿಗೂಢ ಸಾವು: ಆತ್ಮಹತ್ಯೆ ಮಾಡಿದನೇ ಗೋಲ್ಡನ್ ಮ್ಯಾನ್!



 

ಮೈತುಂಬಾ ಚಿನ್ನಾಭರಣಗಳನ್ನು ಧರಿಸಿಕೊಂಡು ಸುದ್ದಿಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಈ ಸಾವು ಭಾರೀ ಅನುಮಾನಕ್ಕೆ ಕಾರಣವಾಗಿದೆ.


ಅಹ್ಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಚಿನ್ನದ ಮನುಷ್ಯ ಎಂದೇ ಕರೆಯಲ್ಪಡುತ್ತಿದ್ದ ಕುಂಜಾಲ್ ಪಟೇಲ್ ಯಾನೆ ಕೆ.ಪಿ.ಪಟೇಲ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.



ಕುಟುಂಬದ ಜೊತೆಗಿನ ಜಗಳದ ಬಳಿಕ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.


ತನ್ನ ಕುತ್ತಿಗೆಯನ್ನು ತಾನೇ ಹಿಸುಕಿಕೊಂಡ ರೀತಿಯಲ್ಲಿ ಪಟೇಲ್ ಆತ್ಮಹತ್ಯೆ ಮಾಡಿಕೊಂಡಿರುವುದು ಸಂಶಯಕ್ಕೆ ಕಾರಣವಾಗಿದೆ. ಇದು ಹೇಗೆ ಸಾಧ್ಯ ಎನ್ನುವ ಅನುಮಾನಗಳು ಕೂಡ ಮೂಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.