-->
Lock Down relaxed -  ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಲ್ಲಿ ಭಾಗಶಃ, 16 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲ

Lock Down relaxed - ದಕ್ಷಿಣ ಕನ್ನಡ ಸಹಿತ 13 ಜಿಲ್ಲೆಗಳಲ್ಲಿ ಭಾಗಶಃ, 16 ಜಿಲ್ಲೆಗಳಲ್ಲಿ ಲಾಕ್‌ಡೌನ್ ಮತ್ತಷ್ಟು ಸಡಿಲ

ವಾರಾಂತ್ಯ ಕರ್ಫ್ಯೂ ಮುಂದುವರಿಕೆ

ನೈಟ್ ಕರ್ಫ್ಯೂ ಮುಂದುವರಿಕೆ

ರಾಜ್ಯದ 16 ಜಿಲ್ಲೆಗಳಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಕೋವಿಡ್ ಪಾಸಿಟಿವಿಟಿ ದರದ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ.


ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಮುಂದುವರಿಯಲಿದ್ದು, ವಾರಾಂತ್ಯದಲ್ಲಿ ಕಠಿಣ ಕರ್ಫ್ಯೂ ಮುಂದುವರಿಯಲಿದೆ ಎಂದು ಹೇಳಿದ್ದಾರೆ.


ಸೋಮವಾರದಿಂದ ಅನ್‌ಲಾಕ್‌ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಇದರಿಂದ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಜನಜೀವನ ಸಹಜ ಸ್ಥಿತಿಗೆ ಮರಳಲಿದೆ.


ಉಳಿದ 13 ಜಿಲ್ಲೆಗಳಲ್ಲಿ ಜೂನ್ 11ರಂದು ನೀಡಲಾದ ಅನ್‌ ಲಾಕ್ ಆದೇಶ ಜಾರಿಗೆ ಬರಲಿದೆ.

ಕೊಪ್ಪಳ, ಕೋಲಾರ, ಬೆಂಗಳೂರು ನಗರ, ತುಮಕೂರು, ಗದಗ, ರಾಯಚೂರು, ರಾಮನಗರ, ಯಾದಗಿರಿ ಹಾಗೂ ಬೀದರ್‌ ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಆಗಲಿದೆ.


ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಳೆದ ವಾರ 13 ಜಿಲ್ಲೆಗಳಿಗೆ ಜೂನ್ 11ರಂದು ನೀಡಲಾದ ಅನ್‌ ಲಾಕ್ ಆದೇಶ ಜಾರಿಗೆ ಬರಲಿದೆ.


ಹಾಸನ ಉಡುಪಿ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ ಸಹಿತ 16 ಜಿಲ್ಲೆಗಳಲ್ಲಿ ಮತ್ತಷ್ಟು ಸಡಿಲಿಕೆ ಆಗಲಿದೆ.


ಪ್ರೇಕ್ಷಕರಿಲ್ಲದ ಹೊರಾಂಗಣ ಕ್ರೀಡೆಗೆ ಅವಕಾಶ


ಸಿನಿಮಾ ಮಂದಿರಗಳಿಗೆ ಅವಕಾಶ


ಚಪ್ಪಲ್ ಅಂಗಡಿಗಳು ಓಪನ್


ಎಲ್ಲ ಅಂಗಡಿಗಳನ್ನೂ ಸಂಜೆ 5 ಗಂಟೆ ವರೆಗೆ ತೆರೆಯಲು ಅವಕಾಶ ನೀಡಲಾಗಿದೆ.


ಹೊಟೇಲ್ ರೆಸ್ಟೋರೆಂಟ್‌ಗಳಲ್ಲಿ ಶೇ. 50ರಷ್ಟು ಗ್ರಾಹಕರಿಗೆ ಅವಕಾಶ


ಜಿಮ್‌ಗಳಲ್ಲಿ ಶೇ. 50ರಷ್ಟು ಮಂದಿಗೆ ಅವಕಾಶ


ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ


ಸರ್ಕಾರಿ ಕಚೇರಿಗಳಲ್ಲಿ ಶೇ. 50ರಷ್ಟು ಸಿಬ್ಬಂದಿಗೆ ಅವಕಾಶ


ಶಾಪಿಂಗ್ ಕಾಂಪ್ಲೆಕ್ಸ್ ಓಪನ್ ಆಗಲ್ಲ


ರಾಜ್ಯಾದ್ಯಂತ ಮೊಬೈಲ್ ಅಂಗಡಿಗಳು ಓಪನ್


ಎಲೆಕ್ಟ್ರಾನಿಕ್ ಶಾಪ್ ಓಪನ್ಮೈಸೂರು ಜಿಲ್ಲೆಯಲ್ಲಿ ಶೇ. 10ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವುದರಿಂದ ಈ ಹಿಂದಿನ ಲಾಕ್‌ಡೌನ್ ನಿರ್ಬಂಧ ಮುಂದುವರಿಯಲಿದೆ.ರಾಜ್ಯಾದ್ಯಂತ ಬಸ್‌ಗಳ ಸೇವೆ ಆರಂಭಗೊಳ್ಳಲಿದ್ದು, ಶೇ. 50ರಷ್ಟು ಪ್ರಯಾಣಿಕರಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.Ads on article

Advertise in articles 1

advertising articles 2

Advertise under the article