Notice to Govt- ಶಾಲಾ ಮಕ್ಕಳಿಗೆ ಲಸಿಕೆ ಕಡ್ಡಾಯ: ಸರ್ಕಾರಕ್ಕೆ ಲೀಗಲ್ ಜಾರಿಗೊಳಿಸಿದ ಮಂಗಳೂರು ವೈದ್ಯ





ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳ ಆರಂಭಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಲಸಿಕೆ ಕುರಿತ ಸರ್ಕಾರಿ ಆದೇಶದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಸ್ವತಃ ವೈದ್ಯರೊಬ್ಬರು ಸರ್ಕಾರಕ್ಕೆ ಲೀಗಲ್ ನೋಟೀಸ್ ಜಾರಿಗೊಳಿಸುವ ಮೂಲಕ ಈ ಆದೇಶದ ವಿರುದ್ಧ ಕಾನೂನು ಸಮರ ಆರಂಭಿಸಿದ್ದಾರೆ.



ವಿದ್ಯಾರ್ಥಿಗಳು ಮೊದಲ ಡೋಸ್ ಪಡೆದುಕೊಂಡರೆ ಮಾತ್ರ ಶಾಲಾ ಕಾಲೇಜಿಗೆ ಪ್ರವೇಶ. ಆ ಬಳಿಕವೇ ಶಾಲಾರಂಭ ಎಂಬ ಸರ್ಕಾರದ ಸಚಿವರ ಹೇಳಿಕೆಯನ್ನು ಪ್ರಶ್ನಿಸಿ ಈ ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ.






ಗುಜರಾತ್ ಮತ್ತು ಮೇಘಾಲಯ ಹೈಕೋರ್ಟ್‌f ಗಳ ತೀರ್ಪನ್ನು ಕಾನೂನು ತಿಳುವಳಿಕಾ ನೋಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ. ಮುಖ್ಯಮಂತ್ರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತು ಉಪ ಮುಖ್ಯಮಂತ್ರಿ ಸಿ.ಎನ್. ಅಶ್ವಥ್‌ ನಾರಾಯಣ ಅವರನ್ನು ಉದ್ದೇಶಿಸಿ ಲೀಗಲ್ ನೋಟೀಸ್ ಜಾರಿಗೊಳಿಸಲಾಗಿದೆ.



ಲಸಿಕೆ ಕಡ್ಡಾಯ ಆದೇಶವನ್ನು ತಿದ್ದುಪಡಿ ಮಾಡಬೇಕು ಮತ್ತು ಆನ್‌ಲೈನ್ ಯಾ ಆಫ್‌ಲೈನ್ ಶಿಕ್ಷಣಕ್ಕೆ ಒತ್ತು ನೀಡುವ ಬದಲು ಶಾಲೆಗಳನ್ನು ಪುನಾರಂಭಗೊಳಿಸಬೇಕು ಎಂದು ಲೀಗಲ್ ನೋಟೀಸ್‌ನಲ್ಲಿ ಆಗ್ರಹಿಸಲಾಗಿದೆ.