Rape attempt by president?- ಗ್ರಾ. ಪಂ. ಅಧ್ಯಕ್ಷನ ವಿರುದ್ಧ ಅತ್ಯಾಚಾರ ಯತ್ನ ಪ್ರಕರಣ: ವಿಟ್ಲದಲ್ಲಿ ದೂರು ದಾಖಲು!






ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಮೇಲೆ ಅತ್ಯಾಚಾರ ಯತ್ನ ಆರೋಪ ಕೇಳಿಬಂದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.



ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್ ಅಧ್ಯಕ್ಷರೊಬ್ಬರ ಮೇಲೆ ಯುವತಿಯೋರ್ವಳು ಮಾನಭಂಗಕ್ಕೆ ಯತ್ನ ಪ್ರಕರಣ ದಾಖಲಿಸಿದೆ. ಈ ಘಟನೆ ನಡೆದಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣೆಯಲ್ಲಿ.



ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಎಂಬವರು ಈ ಆರೋಪಕ್ಕೆ ಗುರಿಯಾಗಿದ್ದು, ಅವರ ಮೇಲೆ 23 ವರ್ಷ ವಯಸ್ಸಿನ ಯುವತಿ ದೂರು ನೀಡಿದ್ದಾರೆ.



ಕನ್ಯಾನ ಗ್ರಾಮದ ಪಿಲಿಚಂಡಿ ಗುಡ್ಡದಲ್ಲಿ ನೀರಿನ ಸಂಪರ್ಕ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಗೆ ಬೆಳಗ್ಗೆ ಪಿಡಿಒ ಮತ್ತು ಗ್ರಾ.ಪಂ. ಸಿಬ್ಬಂದಿ ನೀರಿನ ಸಂಪರ್ಕ ಕಡಿತ ಗೊಳಿಸಲು ಮುಂದಾಗಿದ್ದರು ಎಂದು ಹೇಳಲಾಗಿದೆ.



ಇದಾದ ಬಳಿಕ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಹಿಮಾನ್ ಯುವತಿಯ ಮನೆಗೆ ನುಗ್ಗಿ, ಹಲ್ಲೆ ನಡೆಸಿ ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.



ದೂರನ್ನು ಪಡೆದಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಟ್ಲ ಪೊಲೀಸರು, ಈ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu